ADVERTISEMENT

Photos: ರಾಜ್ಯದ ಹಲವೆಡೆ ಎಸಿಬಿ ದಾಳಿ; ಲೆಕ್ಕವಿರದ ಲಕ್ಷಾಂತರ ರೂಪಾಯಿ ನಗದು ವಶ

ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ರಾಜ್ಯ ಸರ್ಕಾರದ 21 ಅಧಿಕಾರಿಗಳ ಮೇಲೆ ಶುಕ್ರವಾರ ಬೆಳಿಗ್ಗೆ ದಾಳಿಮಾಡಿರುವ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ), 80 ಸ್ಥಳಗಳಲ್ಲಿ ಶೋಧ ನಡೆಸುತ್ತಿದೆ.ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಅಡಿಯಲ್ಲಿ 21 ಜನರ ವಿರುದ್ಧ ಮೊಕದ್ದಮೆ ದಾಖಲಿಸಿದ್ದು, ಆರೋಪಿತರ ಮನೆ, ಕಚೇರಿಗಳು, ಸಂಬಂಧಿಕರು ಮತ್ತು ನಿಕಟವರ್ತಿಗಳ ಮನೆಗಳ ಮೇಲೆ ಎಸಿಬಿ ದಾಳಿ ನಡೆಸಿದೆ. ಸಂಸ್ಥೆಯ 300ಕ್ಕೂ ಹೆಚ್ಚು ಅಧಿಕಾರಿಗಳು ಹಾಗೂ ಸಿಬ್ಬಂದಿ ಶೋಧ ಕಾರ್ಯದಲ್ಲಿ ನಿರತರಾಗಿದ್ದಾರೆ.

​ಪ್ರಜಾವಾಣಿ ವಾರ್ತೆ
Published 17 ಜೂನ್ 2022, 6:24 IST
Last Updated 17 ಜೂನ್ 2022, 6:24 IST
ಮುದ್ಗಲ್‌ನ ಪೊಲೀಸ್ ಇನ್ಸ್‌ಪೆಕ್ಟರ್ ಉದಯರವಿ ನಿವಾಸದಲ್ಲಿ ಪತ್ತೆಯಾಗಿರುವ ನಗದು ಮತ್ತು ಚಿನ್ನಾಭರಣ
ಮುದ್ಗಲ್‌ನ ಪೊಲೀಸ್ ಇನ್ಸ್‌ಪೆಕ್ಟರ್ ಉದಯರವಿ ನಿವಾಸದಲ್ಲಿ ಪತ್ತೆಯಾಗಿರುವ ನಗದು ಮತ್ತು ಚಿನ್ನಾಭರಣ   
ಉಡುಪಿಯ ಸಣ್ಣ ನೀರಾವರಿ ಇಲಾಖೆಯ ಸಹಾಯಕ ಎಂಜಿನಿಯರ್ ಹರೀಶ್ ಮನೆಯಲ್ಲಿ ₹4 ಲಕ್ಷ ನಗದು, ಚಿನ್ನಾಭರಣ ವಶ
ಬೆಳಗಾವಿಯ ಲೋಕೋಪಯೋಗಿ ಇಲಾಖೆ ಅಧೀಕ್ಷಕ ಎಂಜಿನಿಯರ್ ಸ್ನಾನದ ಕೋಣೆಯಲ್ಲಿ ₹5 ಲಕ್ಷ ನಗದು ಪತ್ತೆ
ಬಾಗಲಕೋಟೆಯ ಪ್ರಾದೇಶಿಕ ಸಾರಿಗೆ ಅಧಿಕಾರಿ (ಆರ್‌ಟಿಒ) ಯಲ್ಲಪ್ಪ ಪಡಸಾಲಿ ಅವರ ನಿವಾಸದಲ್ಲಿ ₹16 ಲಕ್ಷ ನಗದು ವಶ
ಬೆಂಗಳೂರು ವಿಶ್ವವಿದ್ಯಾಲಯದ ಮೌಲ್ಯಮಾಪನ ವಿಭಾಗದ ನಿವೃತ್ತ ಕುಲಸಚಿವ ಜನಾರ್ದನ್‌ ಅವರಿಗೆ ಸೇರಿದ ಚಂದ್ರಾಲೇಔಟ್‌ನಲ್ಲಿರುವ ನಿವಾಸ
ಉತ್ತರ ಕನ್ನಡ ಜಿಲ್ಲಾ ನೋಂದಣಾಧಿಕಾರಿ ಶ್ರೀಧರ್ ಅವರಿಗೆ ಸೇರಿದ ಕನಕಪುರ ತಾಲ್ಲೂಕಿನ ಹಾರೋಹಳ್ಳಿ ಬಳಿ ಇರುವ ಫಾರ್ಮ್ ಹೌಸ್
ಬೆಳಗಾವಿ ಲೋಕೋಪಯೋಗಿ ಇಲಾಖೆ ಅಧೀಕ್ಷಕ ಎಂಜಿನಿಯರ್ ಬಿ.ವೈ.ಪವಾರ್ ಮನೆಯಲ್ಲಿ ಶುಕ್ರವಾರ ಎಸಿಬಿ ಎಸ್ಪಿ ನ್ಯಾಮಗೌಡರ ನೇತೃತ್ವದ ತಂಡ ತಪಾಸಣೆ ನಡೆಸಿತು
ಗಂಗಾವತಿ ತಾಲ್ಲೂಕಿನ ವಡ್ಡರಹಟ್ಟಿ ಗ್ರಾಮದಲ್ಲಿ ನೆಲೆಸಿರುವ ಗುಪ್ತಚರ ಇಲಾಖೆ ಅಧಿಕಾರಿ ಉದಯರವಿ ಅವರ ಮನೆ
ಅಜ್ಜಂಪುರ ಪುರಸಭೆ ಕಚೇರಿ ಎಸ್‌ಡಿಎ ತಿಮ್ಮಯ್ಯ ಮನೆಗೆ ಎಸಿಬಿ ತಂಡ ದಾಳಿ; ಚಿನ್ನ, ಬೆಳ್ಳಿ ಆಭರಣ, ದಾಖಲೆ ಪರಿಶೀಲನೆ
ರಾಜ್ಯದ ಹಲವು ಅಧಿಕಾರಿಗಳ ಮನೆಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.