ADVERTISEMENT

ಕೇರಳ ಗಡಿಯಲ್ಲಿ ಪ್ರವೇಶ ನಿರ್ಬಂಧ: ಹೈಕೋರ್ಟ್‌ನಲ್ಲಿ ಪಿಐಎಲ್

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2021, 2:45 IST
Last Updated 6 ಮಾರ್ಚ್ 2021, 2:45 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಕೇರಳದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ನಾಗರಿಕರ ‍ಪ್ರವೇಶ ನಿರ್ಬಂಧ ಆದೇಶವನ್ನು ಮಾರ್ಪಡಿಸಲಾಗಿದೆ ಎಂದು ರಾಜ್ಯ ಸರ್ಕಾರವನ್ನು ಹೈಕೋರ್ಟ್ ಪ್ರಶ್ನೆ ಮಾಡಿದೆ.

ನೆರೆ ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚಾದ ಕಾರಣಕ್ಕೆ ಫೆ.22ರಂದು ಹೊರಡಿಸಿರುವ ಪ್ರವೇಶ ನಿರ್ಬಂಧ ಆದೇಶ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

‘ಕೇಂದ್ರ ಗೃಹ ಸಚಿವಾಲಯದ ಮಾರ್ಗಸೂಚಿಗಳ ಪ್ರಕಾರ ಅಂತರರಾಜ್ಯ ಪ್ರವೇಶಕ್ಕೆ ನಿರ್ಬಂಧ ಇಲ್ಲ’ ಎಂದು ಕೇಂದ್ರ ಸರ್ಕಾರದ ಪರ ವಕೀಲರು ಪೀಠಕ್ಕೆ ತಿಳಿಸಿದರು.

ADVERTISEMENT

27 ರಸ್ತೆಗಳಲ್ಲಿ 4 ರಸ್ತೆಗಳನ್ನು ಮಾತ್ರ ತೆರೆಯಲಾಗಿದೆ. ಉಳಿದ ರಸ್ತೆಗಳಲ್ಲಿ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಅರ್ಜಿದಾರರ ಪರ ವಕೀಲರು ತಿಳಿಸಿದರು. ಕೇರಳದಿಂದ ಬರುವ ಪ್ರಯಾಣಿಕರ ಕೋವಿಡ್–19 ನೆಗೆಟಿವ್ ವರದಿ ಪರಿಶೀಲಿಸಲು ರಾಜ್ಯ ಸರ್ಕಾರ ಪ್ರತ್ಯೇಕ ವ್ಯವಸ್ಥೆ ಮಾಡಿಕೊಳ್ಳಬಹುದು ಎಂದು ಪೀಠ ತಿಳಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.