ADVERTISEMENT

ಜಾಗ ನೀಡಲು ರೈತರ ವಿರೋಧ

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2020, 16:00 IST
Last Updated 12 ಆಗಸ್ಟ್ 2020, 16:00 IST

ಬೆಳಗಾವಿ: ಬೆಳಗಾವಿ–ಧಾರವಾಡ ರೈಲು ಮಾರ್ಗ ನಿರ್ಮಾಣಕ್ಕೆ ಜಮೀನು ನೀಡಲು ತಾಲ್ಲೂಕಿನ ನಂದಿಹಳ್ಳಿ ರೈತರು ವಿರೋಧ ವ್ಯಕ್ತಪಡಿಸಿದ್ದಾರೆ.

ಗ್ರಾಮದ ಹೊರವಲಯದಲ್ಲಿ ಬುಧವಾರ ಸಮೀಕ್ಷೆಗೆ ಬಂದಿದ್ದ ರೈಲ್ವೆ ಇಲಾಖೆಯ ಅಧಿಕಾರಿಗಳ ಎದುರು ವಿರೋಧ ದಾಖಲಿಸಿದ ಅವರು, ‘ಫಲವತ್ತಾದ ಕೃಷಿ ಜಮೀನನ್ನು ಸ್ವಾಧೀನಪಡಿಸಿಕೊಳ್ಳಲು ಅವಕಾಶ ಕೊಡುವುದಿಲ್ಲ. ಈ ಜಮೀನುಗಳನ್ನು ಕಳೆದುಕೊಂಡು ಬೀದಿಗೆ ಬೀಳುವುದಕ್ಕೆ ನಾವು ಸಿದ್ಧವಿಲ್ಲ. ಬೇರೆ ಜಾಗವನ್ನು ಆಯ್ಕೆ ಮಾಡಿಕೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.

ಮಾರುತಿ ಲೋಕೂರ, ರಾಜು ಪಾಟೀಲ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.