ADVERTISEMENT

ಕಾನೂನು ಚೌಕಟ್ಟಿನ ಒಳಗೆ ಬಂದರೆ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಕ್ರಮ: ಸಿಎಂ

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2024, 15:30 IST
Last Updated 1 ಡಿಸೆಂಬರ್ 2024, 15:30 IST
<div class="paragraphs"><p>ಸಿಎಂ ಸಿದ್ದರಾಮಯ್ಯ</p></div>

ಸಿಎಂ ಸಿದ್ದರಾಮಯ್ಯ

   

ಬೆಂಗಳೂರು: ‘ಚಂದ್ರಶೇಖರನಾಥ ಸ್ವಾಮೀಜಿ ಅವರ ಪ್ರಕರಣದಲ್ಲಿ ಪೊಲೀಸರು ಕಾನೂನಿನ ದೃಷ್ಟಿಯಲ್ಲಿ ಏನು ಮಾಡಬೇಕೊ ಅದನ್ನು ಮಾಡುತ್ತಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಕಾನೂನು ಚೌಕಟ್ಟಿನ ಒಳಗೆ ಬಂದರೆ ಕ್ರಮ ತೆಗೆದುಕೊಳ್ಳಲಾಗುತ್ತದೆ. ಇಲ್ಲವಾದರೆ ಇಲ್ಲ’ ಎಂದರು. 

ADVERTISEMENT

ಕಾನೂನು ಎಲ್ಲರಿಗೂ ಒಂದೇ: ಚಂದ್ರಶೇಖರನಾಥ ಸ್ವಾಮೀಜಿ ಅವರ ಮೇಲೆ ಎಫ್ಐಆರ್‌ ದಾಖಲಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ‘ಮುಖ್ಯಮಂತ್ರಿ ಈ ಬಗ್ಗೆ ಉತ್ತರ ನೀಡಿದ್ದಾರೆ. ಸ್ವಾಮೀಜಿಗಳು ಯಾರ ಹಕ್ಕಿನ ಬಗ್ಗೆಯೂ ಪ್ರಶ್ನೆ ಮಾಡುವುದು ಬೇಡ ಎಂದು ಮನವಿ ಮಾಡುತ್ತೇನೆ. ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ’ ಎಂದರು.

‘ಸ್ವಾಮೀಜಿ ಮೇಲೆ ಕೇಸ್ ದಾಖಲಿಸಿದರೆ ಉಗ್ರ ಹೋರಾಟ ಮಾಡುವುದಾಗಿ ವಿಪಕ್ಷ ನಾಯಕ ಆರ್. ಅಶೋಕ ಹೇಳಿದ್ದಾರೆ. ಜೆಡಿಎಸ್ ಸರ್ಕಾರ ಬಾಲಗಂಗಾಧರನಾಥ ಸ್ವಾಮೀಜಿ ಮೇಲೆ ಪ್ರಕರಣ ದಾಖಲಿಸಿದಾಗ ಅಶೋಕ, ಬಿಜೆಪಿ ನಾಯಕರು ಎಲ್ಲಿ ಹೋಗಿದ್ದರು? ಕುಮಾರಸ್ವಾಮಿ ಸರ್ಕಾರದಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ ಅವರ ದೂರವಾಣಿ ಕದ್ದಾಲಿಕೆ ಮಾಡಿದಾಗ ಏಕೆ ಮಾತನಾಡಲಿಲ್ಲ? ಈ ಬಗ್ಗೆ ಸಿಬಿಐ ವರದಿ ಇದೆ. ಅದರ ಬಗ್ಗೆ ಯಾಕೆ ಮಾತನಾಡುತ್ತಿಲ್ಲ. ಬಿಜೆಪಿಯವರು ಸುಮ್ಮನೆ ಒಣ ರಾಜಕಾರಣ ಮಾಡುವುದನ್ನು ನಿಲ್ಲಿಸಲಿ. ಬೆಂಕಿ ಹಚ್ಚಿ ಬೀಡಿ ಸೇದುವ ಪ್ರಯತ್ನ ನಿಲ್ಲಿಸಲಿ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.