ಬೆಂಗಳೂರು: ಶಿವಮೊಗ್ಗದಲ್ಲಿ ಪಿಎಫ್ ಐ ಸೇರಿ ಎಂಬ ಪೋಸ್ಟರ್ ಗಳನ್ನು ಅಂಟಿಸಿರುವವರ ವಿರುದ್ಧ ಪೊಲೀಸರು ಈಗಾಗಲೇ ಕ್ರಮ ಕೈಗೊಂಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸೋಮವಾರ ಬೆಂಗಳೂರಿನಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದರು.
ಪಿಎಪಿಐ ರದ್ದು ಮಾಡಿದ ನಂತರ ಹತಾಶರಾಗಿ ಈ ರೀತಿ ಗೋಡೆ ಮೇಲೆ ಬರೆಯುವುದು ಮಾಡುವ ಕೆಲಸ ಮಾಡುತ್ತಿದ್ದಾರೆ. ಇದನ್ನು ನಾನು ಖಂಡಿಸುತ್ತೇನೆ. ಸಮಾಜದಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿರುವುದು ಸರಿಯಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.