ADVERTISEMENT

ಜಿಲ್ಲಾ, ತಾಲ್ಲೂಕು ಆಸ್ಪತ್ರೆ ಸುಸಜ್ಜಿತ ಗೊಳಿಸಲು ಕ್ರಮ: ದಿನೇಶ್ ಗುಂಡೂರಾವ್

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2023, 10:29 IST
Last Updated 1 ನವೆಂಬರ್ 2023, 10:29 IST
ದಿನೇಶ್ ಗುಂಡೂರಾವ್
ದಿನೇಶ್ ಗುಂಡೂರಾವ್   

ಮಂಗಳೂರು: ರಾಜ್ಯದ ಎಲ್ಲ ಜಿಲ್ಲಾ ಆಸ್ಪತ್ರೆಗಳು, ತಾಲ್ಲೂಕು ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳ ಕಟ್ಟಡ ದುರಸ್ತಿ,‌ ಅವುಗಳಿಗೆ ಅಗತ್ಯ ವ್ಯವಸ್ಥೆ ಒದಗಿಸುವ ಮೂಲಕ ಸುಸಜ್ಜಿತಗೊಳಿಸಲು ಯೋಚಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಬುಧವಾರ ಇಲ್ಲಿ ಆಯೋಜಿಸಿದ್ದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ಹೊಸ ಕಟ್ಟಡ ನಿರ್ಮಾಣಕ್ಕೆ ಹೆಚ್ಚು ಆಸಕ್ತಿ ತೋರುವುದಕ್ಕಿಂತ ಇರುವ ವ್ಯವಸ್ಥೆ ಯನ್ನು ಉತ್ತಮಗೊಳಿಸಲು ಯೋಚಿಸಬೇಕಾಗಿದೆ ಎಂದರು.

ರಾಜ್ಯದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸುಮಾರು 65 ಪ್ರಾಥಮಿಕ‌ ಆರೋಗ್ಯ ಕೇಂದ್ರಗಳ ಕೊರತೆ ಇದ್ದು, ಎಲ್ಲವನ್ನೂ ಈ ವರ್ಷವೇ ಪ್ರಾರಂಭಿಸಲು ನಿರ್ಧರಿಸಲಾಗಿದೆ ಎಂದರು.

ADVERTISEMENT

ಮತ್ತೆ ಹೊಸ ನಮ್ಮ ಕ್ಲಿನಿಕ್ ಪ್ರಾರಂಭಿಸುವ ಯೋಚನೆ ಇಲ್ಲ. ಈಗ ಇರುವ ನಮ್ಮ ಕ್ಲಿನಿಕ್ ಗಳಿಗೆ ಪ್ರಯೋಗಾಲಯ ತಜ್ಞರು, ಹೆಚ್ಚುವರಿ ತಪಾಸಣೆಗಳಿಗೆ ಅವಕಾಶ ಕಲ್ಪಿಸಲು ಯೋಚಿಸಲಾಗಿದೆ ಎಂದರು.

ಅಂಗಾಂಗ ದಾನ ಮಾಡುವವರಿಗೆ ಆರ್ಥಿಕ ನೆರವು ನೀಡಲು ಕಾನೂನಿನಲ್ಲಿ ಅವಕಾಶ ಇಲ್ಲ. ಆದರೆ, ಅಂಗಾಂಗ ದಾನ ಮಾಡಿರುವ ವ್ಯಕ್ತಿಯ ಕುಟುಂಬದವರನ್ನು ಗುರುತಿಸುವ ಮೂಲಕ ಅಂಗಾಂಗ ದಾನಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಯೋಚಿಸಲಾಗಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.