ADVERTISEMENT

ವೈದ್ಯರ ಮೇಲಿನ ಹಲ್ಲೆ ತಡೆಗೆ ಕ್ರಮ: ಆರೋಗ್ಯ ಸಚಿವ ಡಾ.ಕೆ. ಸುಧಾಕರ್

ವಿದ್ಯಾರ್ಥಿಗಳ ಜತೆಗಿನ ಸಂವಾದದಲ್ಲಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 25 ಆಗಸ್ಟ್ 2022, 22:00 IST
Last Updated 25 ಆಗಸ್ಟ್ 2022, 22:00 IST
ಬಿಎಂಸಿಆರ್‌ಐ ಡೀನ್ ಡಾ.ಕೆ. ರವಿ ಅವರು ಡಾ.ಕೆ. ಸುಧಾಕರ್ ಅವರನ್ನು ಗೌರವಿಸಿದರು.
ಬಿಎಂಸಿಆರ್‌ಐ ಡೀನ್ ಡಾ.ಕೆ. ರವಿ ಅವರು ಡಾ.ಕೆ. ಸುಧಾಕರ್ ಅವರನ್ನು ಗೌರವಿಸಿದರು.   

ಬೆಂಗಳೂರು: ‘ವೈದ್ಯರಿಗೆ ಭದ್ರತೆ ನೀಡಲು ಹಾಗೂ ಅವರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಲು ಸರ್ಕಾರ ಬದ್ಧವಾಗಿದೆ. ಅವರ ಮೇಲಿನ ಹಲ್ಲೆ ಪ್ರಕರಣಗಳಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ’ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು.

ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (ಬಿಎಂಸಿಆರ್‌ಐ) ನಗರದಲ್ಲಿ ಗುರುವಾರ ಹಮ್ಮಿಕೊಂಡ ‘ಯುವ ಸಂವಾದ’ ಕಾರ್ಯಕ್ರಮದಲ್ಲಿ ಮಾತನಾಡಿದರು.
‘ಕೆಲ ಪ್ರಕರಣಗಳಲ್ಲಿ ರೋಗಿಗಳು ಮೃತಪಟ್ಟಾಗ ವೈದ್ಯರಿಂದ ತಪ್ಪಾ ಗಿದೆ ಎಂದು ಕುಟುಂಬದವರು ಆಲೋಚಿ ಸುತ್ತಾರೆ. ವಾಸ್ತವದಲ್ಲಿ ಪ್ರತಿ ವೈದ್ಯರೂ ರೋಗಿಯನ್ನು ಬದುಕಿಸಲು ತಮ್ಮ ಶಕ್ತಿಮೀರಿ ಪ್ರಯತ್ನಿಸುತ್ತಾರೆ. ವೈದ್ಯರ ಮೇಲೆ ಹಲ್ಲೆ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಕಾನೂನಿನಲ್ಲಿ ಅವಕಾಶವಿದೆ’ ಎಂದು ಹೇಳಿದರು.

‘2020ನೇ ಸಾಲಿನಲ್ಲಿ ವ್ಯಾಸಂಗ ಮಾಡಿದ ವೈದ್ಯಕೀಯ ವಿದ್ಯಾರ್ಥಿಗಳು ಕೋವಿಡ್‌ ಸಾಂಕ್ರಾಮಿಕದ ಪರಿಸ್ಥಿತಿಯ ಹೊಸ ಅನುಭವವನ್ನು ಪಡೆದಿದ್ದಾರೆ. ರಾಜ್ಯದಲ್ಲಿ ಹಿಂದೆ 2,300 ಜನರಿಗೆ ಒಬ್ಬ ವೈದ್ಯರಿದ್ದರು. ಈಗ 900 ಜನರಿಗೆ ಒಬ್ಬ ವೈದ್ಯರಿದ್ದಾರೆ. ಆಯುಷ್‌ ವೈದ್ಯರನ್ನೂ ಸೇರಿಸಿದರೆ ಈ ಸಂಖ್ಯೆ 700ಕ್ಕೆ ಇಳಿಯುತ್ತದೆ. ಒಂದು ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ₹ 750 ಕೋಟಿ ಖರ್ಚಾಗುತ್ತದೆ. ಆದ್ದರಿಂದ ಈ ಹೊರೆ ಕಡಿತ ಮಾಡಲುಸಾರ್ವಜನಿಕ ಖಾಸಗಿ ಸಹ ಭಾಗಿತ್ವದಲ್ಲಿ (ಪಿಪಿಪಿ) ವೈದ್ಯಕೀಯ ಕಾಲೇಜು ನಿರ್ಮಿಸುವ ಪ್ರಸ್ತಾಪವಿದೆ’ ಎಂದರು.

ADVERTISEMENT

‘ರಾಜ್ಯದ 9 ಜಿಲ್ಲೆಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳಿಲ್ಲ. ದಾವಣ ಗೆರೆ, ಉಡುಪಿ, ಕೋಲಾರ ಮತ್ತು ಬೆಂಗ ಳೂರು ಗ್ರಾಮಾಂತರದಲ್ಲಿ ವೈದ್ಯಕೀಯ ಕಾಲೇಜು ಆರಂಭಿಸುವ ಪ್ರಯತ್ನ ನಡೆಯುತ್ತಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಹೇರಳವಾಗಿ ಉದ್ಯೋಗಾವಕಾಶಗಳಿವೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.