ADVERTISEMENT

ಆರ್‌ಎಸ್‌ಎಸ್‌, ಕಾಂಗ್ರೆಸ್‌ ಒಂದಕ್ಕೊಂದು ಬೆಸೆದುಕೊಂಡಿದೆ: ನಟ ಚೇತನ್‌ 

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2021, 11:02 IST
Last Updated 10 ಸೆಪ್ಟೆಂಬರ್ 2021, 11:02 IST
ನಟ ಆ ದಿನಗಳು ಚೇತನ್‌
ನಟ ಆ ದಿನಗಳು ಚೇತನ್‌    

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ, ಬ್ರಾಹ್ಮಣ್ಯ, ಸಿದ್ದರಾಮಯ್ಯ ಅವರ ಕುರಿತು ಮಾತನಾಡಿದ್ದ ನಟ ಆ ದಿನಗಳು ಚೇತನ್‌ ಈಗ, ಕಾಂಗ್ರೆಸ್‌, ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಬಗ್ಗೆ ಮಾತನಾಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ಹಂಚಿಕೊಂಡಿರುವ ಅವರು, ‘ಅಧಿಕಾರಕ್ಕಾಗಿ ಕಾಂಗ್ರೆಸ್ ಪಕ್ಷವು ಏನನ್ನು ಬೇಕಾದರೂ ಮಾಡುತ್ತದೆ. ಬಿಜೆಪಿ ಪಕ್ಷವು ದ್ವೇಷದ ಸಿದ್ದಾಂತವನ್ನು ಹೊಂದಿದೆ. ಕಾಂಗ್ರೆಸ್ ಮತ್ತು ಬಿಜೆಪಿ, ಎರಡನ್ನೂ ಮಣಿಸಬೇಕು,’ ಎಂದು ಹೇಳಿದ್ದಾರೆ.

ADVERTISEMENT

‘ನಾವು ಮೊದಲು ಬಿಜೆಪಿಯನ್ನು ತೊಡೆದು ಹಾಕಿದರೆ, ಕಾಂಗ್ರೆಸ್ ಅದರಿಂದ ಲಾಭ ಪಡೆದು ಇನ್ನಷ್ಟು ಬಲಗೊಳ್ಳುತ್ತದೆ. ಆದರೆ ಮೊದಲು ಕಾಂಗ್ರೆಸ್ಸನ್ನು ತೊಡೆದು ಹಾಕಿದರೆ, ನಮ್ಮ ಸಮಾನತೆಯ ಸಿದ್ಧಾಂತತದಿಂದ ಬಿಜೆಪಿಯ ಸಿದ್ಧಾಂತವನ್ನು ಧ್ವಂಸ ಮಾಡಬಹುದು,’ ಎಂದು ಅವರು ಹೇಳಿದ್ದಾರೆ.

‘ಕಾಂಗ್ರೆಸ್ ಪಕ್ಷದ ಸದಸ್ಯರಾದ ಕೆಬಿ ಹೆಡ್ಗೆವಾರ್ ಅವರು 1925 ರಲ್ಲಿ ಆರ್‌ಎಸ್‌ಎಸ್‌ ಅನ್ನು ಸ್ಥಾಪಿಸಿದರು. ಕಾಂಗ್ರೆಸ್‌ನ ಮತ್ತೊಬ್ಬ ಸದಸ್ಯರಾದ ಬಾಲ ಗಂಗಾಧರ ತಿಲಕ್ ಅವರು ಹೆಡ್ಗೆವಾರ್ ಅವರಿಂದ ಪ್ರಭಾವಿತರಾದರು. ಕಾಂಗ್ರೆಸ್ ಮತ್ತು ಆರ್‌ಎಸ್‌ಎಸ್‌ ಯಾವತ್ತಿನಿಂದಲೂ ಒಂದಕ್ಕೊಂದು ಬೆಸೆದುಕೊಂಡೇ ಇದೆ. ಬ್ರಾಹ್ಮಣ್ಯವನ್ನು ಉಳಿಸಿಕೊಳ್ಳುವುದರಿಂದ ಕಾಂಗ್ರೆಸ್ ಮತ್ತು ಆರ್‌ಎಸ್‌ಎಸ್‌ ಎರಡಕ್ಕೂ ಲಾಭವಾಗುತ್ತದೆ. ಸಮಾನತೆಗಾಗಿ ಕಾಂಗ್ರೆಸ್ ಮತ್ತು ಸಂಘ ಎರಡನ್ನೂ ಸೋಲಿಸಬೇಕು ಎಂದು ಅವರು ಬರೆದುಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.