
ಪ್ರಜಾವಾಣಿ ವಾರ್ತೆ
ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿ ಜೈಲಿನಲ್ಲಿರುವ ನಟ ದರ್ಶನ್ ಅವರ ಶಸ್ತ್ರಾಸ್ತ್ರ ಪರವಾನಗಿ ಅಮಾನತು ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಈ ಸಂಬಂಧ ದರ್ಶನ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿ ಆಕ್ಷೇಪಣೆ ಸಲ್ಲಿಸುವಂತೆ ರಾಜ್ಯ ಸರ್ಕಾರ ಮತ್ತು ಆಡಳಿತ ವಿಭಾಗದ ಡಿಸಿಪಿ ಅವರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿದೆ.
ದರ್ಶನ್ 2008ರಿಂದ ಶಸ್ತ್ರಾಸ್ತ್ರ ಹೊಂದಲು ಪರವಾನಿಗೆ ಪಡೆದುಕೊಂಡಿದ್ದರು. ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದ ಸಂದರ್ಭದಲ್ಲಿ, ‘ಶಸ್ತ್ರಾಸ್ತ್ರ ದುರುಪಯೋಗ ಪಡಿಸಿಕೊಳ್ಳುವ ಸಾಧ್ಯತೆಯಿದೆ’ ಎಂಬ ಕಾರಣಕ್ಕಾಗಿ 2025ರ ಜನವರಿ 20ರಂದು ಪರವಾನಗಿ ಅಮಾನತುಪಡಿಸಿ ಆದೇಶಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.