ಬೆಂಗಳೂರು: ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರ ಪುತ್ರ, ಚಿತ್ರನಟ ನಿಖಿಲ್ ಕುಮಾರಸ್ವಾಮಿಗೆ ಕಂಕಣ ಬಲ ಕೂಡಿಬಂದಿದೆ.
ಕಾಂಗ್ರೆಸ್‌ನ ಹಿರಿಯ ಶಾಸಕ ಎಂ.ಕೃಷ್ಣಪ್ಪ ಅವರ ಅಣ್ಣನ ಮೊಮ್ಮಗಳು ರೇವತಿ ಜತೆ ವಿವಾಹ ನಿಶ್ಚಯವಾಗುವ ಸಾಧ್ಯತೆ ಇದೆ. ಭಾನುವಾರ ಹೆಣ್ಣು ನೋಡುವ ಶಾಸ್ತ್ರ ನಡೆದಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.ಹೆಣ್ಣು ನೋಡುವ ಶಾಸ್ತ್ರದ ವೇಳೆಯಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ, ಚೆನ್ನಮ್ಮ, ಎಚ್.ಡಿ.ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ ಇದ್ದರು.
ನಿಖಿಲ್ ಕುಮಾರಸ್ವಾಮಿ ಕನ್ನಡ ಚಿತ್ರರಂಗದಲ್ಲಿ ಸುದ್ದಿ ಮಾಡಿದ ಕುರುಕ್ಷೇತ್ರ, ಜಾಗ್ವಾರ್ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.