ADVERTISEMENT

ಕಾಂಗ್ರೆಸ್‌ ಸೇರಿದ ಭಾವನಾ: ಉಸ್ತುವಾರಿ ಸುರ್ಜೆವಾಲ ಶುಭಾಶಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 16 ನವೆಂಬರ್ 2021, 12:25 IST
Last Updated 16 ನವೆಂಬರ್ 2021, 12:25 IST
ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೆವಾಲ ಅವರೊಂದಿಗೆ ನಟಿ ಭಾವನಾ
ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೆವಾಲ ಅವರೊಂದಿಗೆ ನಟಿ ಭಾವನಾ    

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೆವಾಲ ಅವರನ್ನು ಮಂಗಳವಾರ ಭೇಟಿಯಾಗಿರುವ ನಟಿ ಭಾವನಾ ಅವರು, ಕಾಂಗ್ರೆಸ್‌ ಸೇರಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಸುರ್ಜೆವಾಲ, ‘ ಕಾಂಗ್ರೆಸ್‌ನ ಮಾಜಿ ಕಾರ್ಯಕರ್ತೆ, ಕನ್ನಡದ ನಟಿ ಭಾವನಾ ರಾಮಣ್ಣ ಅವರು ನನ್ನನ್ನು ಭೇಟಿಯಾದರು. ಕರ್ನಾಟಕದಲ್ಲಿ ಕಾಂಗ್ರೆಸ್‌ ಸೇರಿ, ಪಕ್ಷಕ್ಕಾಗಿ ದುಡಿಯುವ ಸಂಕಲ್ಪವನ್ನು ಅವರು ಮಾಡಿದ್ದಾರೆ. ಪ್ರತಿಯೊಬ್ಬರ ಸೇರ್ಪಡೆಯೊಂದಿಗೆ ಕಾಂಗ್ರೆಸ್‌ ಪ್ರಾಬಲ್ಯ ಪಡೆಯಲಿದೆ ಎಂದು ನಾನು ನಿಶ್ಚಿತವಾಗಿ ಭಾವಿಸಿದ್ದೇನೆ. ಅವರಿಗೆ ಶುಭಾಶಯಗಳು,‘ ಎಂದು ಟ್ವೀಟ್‌ ಮಾಡಿದ್ದಾರೆ.

ಈ ಹಿಂದೆ ಕಾಂಗ್ರೆಸ್‌ನಲ್ಲೇ ಇದ್ದ ಭಾವನಾ2018ರ ಮೇ 10ರಂದು ಬಿಜೆಪಿ ಸೇರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.