ADVERTISEMENT

Gold Smuggling Case: ನಟಿ ರನ್ಯಾ ರಾವ್‌ ಬಂಧನ ಆದೇಶ ಎತ್ತಿಹಿಡಿದ ಹೈಕೋರ್ಟ್‌

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2025, 0:30 IST
Last Updated 20 ಡಿಸೆಂಬರ್ 2025, 0:30 IST
<div class="paragraphs"><p>ರನ್ಯಾ ರಾವ್‌</p></div>

ರನ್ಯಾ ರಾವ್‌

   

ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಹರ್ಷವರ್ಧಿನಿ ಅಲಿಯಾಸ್‌ ರನ್ಯಾ ರಾವ್‌, ತರುಣ್‌ ಕೊಂಡೂರು ರಾಜು ಮತ್ತು ಸಾಹಿಲ್‌ ಜೈನ್‌ ಅವರನ್ನು, ವಿದೇಶಿ ವಿನಿಮಯ ನಿಯಂತ್ರಣ ಮತ್ತು ಕಳ್ಳಸಾಗಣೆ ಚಟುವಟಿಕೆಗಳ ತಡೆ ಕಾಯ್ದೆ (ಕಾಫಿಪೋಸಾ) ಅಡಿ ಬಂಧಿಸಿರುವ ಕೇಂದ್ರ ಸರ್ಕಾರದ ಆದೇಶವನ್ನು ಹೈಕೋರ್ಟ್‌ ಎತ್ತಿ ಹಿಡಿದಿದೆ.

‘ನಮ್ಮನ್ನು ಕಾಫಿಪೋಸಾ ಕಾಯ್ದೆ–1974ರ ಅಡಿಯಲ್ಲಿ ಬಂಧಿಸಿರುವ ಕ್ರಮ ಕಾನೂನುಬಾಹಿರ ಎಂದು ಘೋಷಿಸಬೇಕು’ ಎಂದು ಕೋರಲಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಅನು ಶಿವರಾಮನ್‌ ಹಾಗೂ ನ್ಯಾಯಮೂರ್ತಿ ವಿಜಯಕುಮಾರ್‌ ಎ. ಪಾಟೀಲ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಶುಕ್ರವಾರ ಪ್ರಕಟಿಸಿದೆ.

ADVERTISEMENT

ರನ್ಯಾ ಮಲತಾಯಿ ಎಚ್‌.ಪಿ.ರೋಹಿಣಿ, ತರುಣ್‌ ತಾಯಿ ರಾಮರಾಜು ಮತ್ತು ಪ್ರಿಯಾಂಕಾ ಸರ್ಕಾರಿಯಾ ಸಲ್ಲಿಸಿದ್ದ ಮೂರು ಪ್ರತ್ಯೇಕ ಹೇಬಿಯಸ್‌ ಕಾರ್ಪಸ್‌ ಅರ್ಜಿಗಳನ್ನು ನ್ಯಾಯಪೀಠ ವಜಾಗೊಳಿಸಿದೆ. ವಿಸ್ತೃತ ಆದೇಶ ಇನ್ನಷ್ಟೇ ಪ್ರಕಟವಾಗಬೇಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.