ಉಮಾಶ್ರೀ
ಚಿತ್ರದುರ್ಗ: ರಂಗಭೂಮಿಗೆ ಅಪೂರ್ವ ಕೊಡುಗೆ ನೀಡಿದವರಿಗೆ ಸಾಣೇಹಳ್ಳಿ ಶ್ರೀ ಶಿವಕುಮಾರ ಕಲಾಸಂಘ ಕೊಡಮಾಡುವ ‘ಶ್ರೀ ಶಿವಕುಮಾರ ಪ್ರಶಸ್ತಿ’ಗೆ ಹಿರಿಯ ನಟಿ, ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ ಆಯ್ಕೆಯಾಗಿದ್ದಾರೆ.
2004ರಿಂದ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಹೆಸರಿನಲ್ಲಿ ಪ್ರಶಸ್ತಿ ನೀಡಲಾಗುತ್ತಿದೆ. ಪ್ರಶಸ್ತಿಯು ₹50,000 ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ.
ನ.2ರಿಂದ 7ರವರೆಗೆ ಸಾಣೇಹಳ್ಳಿಯಲ್ಲಿ ನಡೆಯುವ ರಾಷ್ಟ್ರೀಯ ನಾಟಕೋತ್ಸವದ ಸಮಾರೋಪ ಸಮಾರಂಭದ ದಿನ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತರಳಬಾಳು ಮಠ ಸಾಣೇಹಳ್ಳಿ ಶಾಖಾ ಮಠದ ಪೀಠಾಧ್ಯಕ್ಷ ಪಂಡಿತಾರಾಧ್ಯ ಸ್ವಾಮೀಜಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.