ಬೆಂಗಳೂರು: ‘2024-2025ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಒಂದು ಲಕ್ಷ ಟನ್ ಜೋಳ ಖರೀದಿಸಲು ತೀರ್ಮಾನಿಸಲಾಗಿದೆ’ ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದರು.
ಬಳ್ಳಾರಿ ಉಸ್ತುವಾರಿ ಸಚಿವ ಜಮೀರ್ ಅಹ್ಮದ್‌ಖಾನ್ ಮತ್ತು ಬಳ್ಳಾರಿಯ ರೈತರ ನಿಯೋಗದ ಜೊತೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ‘ಹೆಚ್ಚು ಜೋಳ ಬೆಳೆಯುವ ಬಳ್ಳಾರಿ, ರಾಯಚೂರು, ವಿಜಯನಗರ ಜಿಲ್ಲೆಗಳಲ್ಲಿ ಹಿಂಗಾರು ಹಂಗಾಮಿನಲ್ಲಿ ಸರ್ಕಾರದ ವತಿಯಿಂದ ಬೆಂಬಲ ಬೆಲೆ ಯೋಜನೆಯಡಿ ಜೋಳ ಖರೀದಿಸಲು ತೀರ್ಮಾನಿಸಲಾಗಿದೆ. ಹೈಬ್ರೀಡ್ 3,371 ಮಾಲ್ದಂಡಿ ಜೋಳಕ್ಕೆ ಪ್ರತಿ ಕ್ವಿಂಟಲ್‌ಗೆ ₹ 3,421 ದರ ನಿಗದಿಪಡಿಸಲಾಗಿದೆ’ ಎಂದರು.
‘ನೋಂದಣಿ ಮಾಡಿಕೊಂಡಿರುವ ರೈತರು ಮತ್ತು ಹೊಸದಾಗಿ ನೋಂದಾಯಿಸುವ ರೈತರು ತಾವು ಬೆಳೆದ ಜೋಳವನ್ನು ನಿರ್ದಿಷ್ಟ ಖರೀದಿ ಕೇಂದ್ರಗಳಲ್ಲಿ ನೀಡಬೇಕು’ ಎಂದರು.
‘ಅನ್ನ ಭಾಗ್ಯ ಯೋಜನೆಯ ಪ್ರತಿ ಫಲಾನುಭವಿಗೆ 5 ಕೆಜಿ ಪಡಿತರಧಾನ್ಯ ನೀಡಲಾಗುತ್ತಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ 2 ಕೆಜಿ ಅಕ್ಕಿಯ ಜೊತೆಗೆ 3 ಕೆಜಿ ಜೋಳ ವಿತರಿಸಲು ತೀರ್ಮಾನಿಸಲಾಗಿದೆ’ ಎಂದೂ ಮುನಿಯಪ್ಪ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.