ADVERTISEMENT

‘ನಗರಪ್ರದೇಶಗಳಲ್ಲಿ ಹೆಚ್ಚುವರಿ 2 ಸಾವಿರ ಅಂಗನವಾಡಿಗೆ ಪ್ರಸ್ತಾವ’

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2021, 19:00 IST
Last Updated 5 ಫೆಬ್ರುವರಿ 2021, 19:00 IST

ಬೆಂಗಳೂರು: ‘ರಾಜ್ಯದ ನಗರ ಪ್ರದೇಶಗಳಲ್ಲಿ ಹೆಚ್ಚುವರಿಯಾಗಿ ಎರಡು ಸಾವಿರ ಅಂಗನವಾಡಿಗಳನ್ನು ಆರಂಭಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ’ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.

ವಿಧಾನಪರಿಷತ್‍ನಲ್ಲಿ ಅಂಗನವಾಡಿ ವಿಷಯ ಪ್ರಸ್ತಾಪಿಸಿದ ಕಾಂಗ್ರೆಸ್ಸಿನ ಯು.ಬಿ. ವೆಂಕಟೇಶ್, ‘ಬೆಂಗಳೂರಿನಲ್ಲಿ 4.44 ಲಕ್ಷ ಹೆಣ್ಣು ಮಕ್ಕಳು, 4.72 ಲಕ್ಷ ಗಂಡು ಮಕ್ಕಳು ಸೇರಿ 9.16 ಲಕ್ಷ ಮಕ್ಕಳಿದ್ದಾರೆ. ಮುಂದಿನ ದಿನಗಳಲ್ಲಿ ಇದು 10 ಲಕ್ಷ ಆಗಲಿದೆ. ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಅಂಗನವಾಡಿಗಳು ಇಲ್ಲ’ ಎಂದರು.

‘ಅಂಗನವಾಡಿ ಸಂಖ್ಯೆಗಳನ್ನು ಹೆಚ್ಚಿಸಬೇಕು. ಅಲ್ಲದೆ, ಅವುಗಳನ್ನು ಮೇಲ್ದರ್ಜೆಗೆ ಏರಿಸಬೇಕು. ಬೆಂಗಳೂರಿನಲ್ಲಿ ಕೆಲಸ ಮಾಡುವ ಅಂಗನವಾಡಿ ನೌಕರರು ಮತ್ತು ಸಹಾಯಕಿಯರಿಗೆ ಗೌರವಧನ ಹೆಚ್ಚಿಸಬೇಕು’ ಎಂದೂ ಕೋರಿದರು.

ADVERTISEMENT

‘ರಾಜ್ಯದಲ್ಲಿ 2,420 ಅಂಗನವಾಡಿಗಳಿವೆ, 55 ಅಂಗನವಾಡಿ ಕಾರ್ಯಕರ್ತೆಯರು, 209 ಸಹಾಯಕಿಯರ ಹುದ್ದೆಗಳು ಖಾಲಿ ಇವೆ. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನೇಮಕಾತಿ ನಡೆಯುತ್ತಿದೆ. ಅಂಗನವಾಡಿ ಸೌಲಭ್ಯವನ್ನು ಉನ್ನತೀಕರಿಸಲು ಕಾರ್ಪರೇಟ್‌ ಸಂಸ್ಥೆಗಳ ಸಾಮಾಜಿಕ ಹೊಣೆಗಾರಿಕೆ ನಿಧಿ (ಸಿಎಸ್‌ಆರ್‌) ಬಳಕೆ ಮಾಡಲಾಗುತ್ತಿದೆ’ ಎಂದು ಜೊಲ್ಲೆ ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.