ADVERTISEMENT

ಎಂ.ಬಿ.ಎ ಕೋರ್ಸ್‌ ಪ್ರವೇಶಕ್ಕೆ ಹೆಚ್ಚುವರಿ ಶುಲ್ಕ: ಮುಂದಿನ ವರ್ಷಕ್ಕೆ ಹೊಂದಾಣಿಕೆ 

​ಪ್ರಜಾವಾಣಿ ವಾರ್ತೆ
Published 25 ಏಪ್ರಿಲ್ 2025, 15:47 IST
Last Updated 25 ಏಪ್ರಿಲ್ 2025, 15:47 IST
<div class="paragraphs"><p>ಸಾಂಕೇತಿಕ ಚಿತ್ರ</p></div>

ಸಾಂಕೇತಿಕ ಚಿತ್ರ

   

ಬೆಂಗಳೂರು: ಎಂ.ಬಿ.ಎ ಕೋರ್ಸ್‌ ಪ್ರವೇಶಕ್ಕೆ ಹೆಚ್ಚುವರಿಯಾಗಿ ಸಂಗ್ರಹಿಸಿರುವ ₹88,310 ಶುಲ್ಕವನ್ನು ಎರಡನೇ ವರ್ಷದ ಶುಲ್ಕಕ್ಕೆ ಹೊಂದಾಣಿಕೆ ಮಾಡಿಕೊಳ್ಳಲು ಶುಲ್ಕ ನಿಯಂತ್ರಣ ಸಮಿತಿ ಅಧ್ಯಕ್ಷ ನ್ಯಾಯಮೂರ್ತಿ ಬಿ.ಶ್ರೀನಿವಾಸಗೌಡ ಅವರು ವೆಂಕಟಗಿರಿಕೋಟೆಯ ರೀಜನಲ್‌ ಕಾಲೇಜಿಗೆ ಸೂಚಿಸಿದ್ದಾರೆ.

‘ನಿಗದಿಗಿಂತ ಹೆಚ್ಚು ಶುಲ್ಕ ವಸೂಲಿ ಮಾಡಿದ್ದಾರೆ’ ಎಂದು ಮೊದಲನೇ ವರ್ಷಕ್ಕೆ ಪ್ರವೇಶ ಪಡೆದ ಮೂವರು ವಿದ್ಯಾರ್ಥಿಗಳು  ಸಮಿತಿಗೆ ದೂರು ನೀಡಿದ್ದರು. ಕಾಲೇಜಿನ ಆಡಳಿತ ಮಂಡಳಿಯ ಪ್ರತಿನಿಧಿಗಳ ಜತೆ ಮಾತುಕತೆ ನಡೆಸಿದ ನಂತರ ಮುಂದಿನ ವರ್ಷದ ಶುಲ್ಕಕ್ಕೆ ಅದನ್ನು ಹೊಂದಾಣಿಕೆ ಮಾಡಿಕೊಳ್ಳಲು ನಿರ್ಧರಿಸಲಾಯಿತು. ಈ ಸಂಬಂಧ ವಿದ್ಯಾರ್ಥಿಗಳು ಹಾಗೂ ಕಾಲೇಜಿನ ಆಡಳಿತ ಮಂಡಳಿ ಪ್ರತಿನಿಧಿಗಳು ಒಪ್ಪಂದಕ್ಕೆ ಸಹಿ ಹಾಕಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.