ADVERTISEMENT

ಹೆಚ್ಚುವರಿ ಮೀಸಲು: ವರದಿ ಸಮಯ ಕೇಳಿದ ಸಮಿತಿ

​ಪ್ರಜಾವಾಣಿ ವಾರ್ತೆ
Published 12 ಜೂನ್ 2022, 20:14 IST
Last Updated 12 ಜೂನ್ 2022, 20:14 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಹೆಚ್ಚುವರಿಯಾಗಿ ಮೀಸಲಾತಿ ಕಲ್ಪಿಸುವ ಸಂಬಂಧ ರಚನೆಯಾಗಿದ್ದ ನ್ಯಾಯಮೂರ್ತಿ ಸುಭಾಷ್ ಅಡಿ ನೇತೃತ್ವದ ಸಮಿತಿ ತನ್ನ ವರದಿಯನ್ನು ಅಂತಿಮಗೊಳಿಸಿದ್ದು, ವರದಿ ಸಲ್ಲಿಸಲು ಮುಖ್ಯಮಂತ್ರಿ ಅವರಿಗೆ ಸಮಯ ಕೇಳಿದೆ.

‘ಎಸ್‌ಸಿ., ಎಸ್‌ಟಿ ಸಮುದಾಯಗಳಿಗೆ ಹೆಚ್ಚುವರಿ ಮೀಸಲಾತಿ ಕಲ್ಪಿಸುವ ಸಂಬಂಧ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಹಿಂದೆ ಈ ಸಮಿತಿಯನ್ನು ರಚಿಸಿತ್ತು. ಸಮಗ್ರವಾಗಿ ಅಧ್ಯಯನ ನಡೆಸಿ ಸಮಿತಿ ಅಂತಿಮ ವರದಿಯನ್ನು ಸಿದ್ಧಪಡಿಸಿದೆ ಎಂದು ಮೂಲಗಳು ತಿಳಿಸಿವೆ.

ಅಂತಿಮಗೊಂಡಿರುವ ಆ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲು ಸಿದ್ಧತೆ ಸಮಿತಿ ಮಾಡಿಕೊಂಡಿದೆ. ಮುಖ್ಯಮಂತ್ರಿ ಸಮಯ ನೀಡಿದಂತೆ ಸಲ್ಲಿಸಲಿದೆ ಎಂದು ಖಚಿತಪಡಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.