ಬೆಂಗಳೂರು: ಮೂವರು ಐಎಎಸ್ ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆಗಾರಿಕೆ ವಹಿಸಿ ಹಾಗೂ ಓರ್ವ ಐಎಎಸ್ ಅಧಿಕಾರಿಯನ್ನು ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಶನಿವಾರ ಆದೇಶ ಹೊರಡಿಸಿದೆ.
ಹೆಚ್ಚುವರಿ ಹೊಣೆಗಾರಿಕೆ: ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಹಾಗೂ ತಂತ್ರಜ್ಞಾನ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಏಕ್‍ರೂಪ್ ಕೌರ್ ಅವರಿಗೆ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.
ಕೆಪಿಎಸ್‌ಸಿ ಕಾರ್ಯದರ್ಶಿ ರಮಣ್‍ದೀಪ್ ಚೌಧರಿ ಅವರಿಗೆ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಸರ್ಕಾರದ ಕಾರ್ಯದರ್ಶಿ, ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (ಕ್ರೈಸ್) ಕಾರ್ಯಕಾರಿ ನಿರ್ದೇಶಕ ಪಿ. ಕಾಂತರಾಜು ಅವರಿಗೆ ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಹುದ್ದೆಯ ಹೆಚ್ಚುವರಿ ಹೊಣೆ ನೀಡಲಾಗಿದೆ.
ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪ್ರವೀಣ್ ಪಿ. ಬಾಗೇವಾಡಿ ಅವರನ್ನು ಕೋಲಾರ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.