ADVERTISEMENT

ಪಿಎಸ್‌ಐ ಹಗರಣ: ಅಮೃತ್ ಪೌಲ್ ಬಂಧನ– ಎಡಿಜಿಪಿ ಒಬ್ಬರ ಸೆರೆ ರಾಜ್ಯದಲ್ಲಿ ಇದೇ ಮೊದಲು

​ಪ್ರಜಾವಾಣಿ ವಾರ್ತೆ
Published 4 ಜುಲೈ 2022, 10:55 IST
Last Updated 4 ಜುಲೈ 2022, 10:55 IST
ಅಮೃತ್ ಪೌಲ್
ಅಮೃತ್ ಪೌಲ್   

ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ವಶಕ್ಕೆ ಪಡೆದಿದ್ದ ಎಡಿಜಿಪಿ ಅಮೃತ್ ಪೌಲ್ ಅವರನ್ನು ಬಂಧಿಸಿರುವ ಸಿಐಡಿ ಅಧಿಕಾರಿಗಳು, ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಕರೆತಂದಿದ್ದಾರೆ.

ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದ ಅಮೃತ್ ಪೌಲ್ ಅವರನ್ನು ನಾಲ್ಕನೇ ಬಾರಿ ವಿಚಾರಣೆಗೆ ಕರೆದಿದ್ದ ಸಿಐಡಿ ಅಧಿಕಾರಿಗಳು, ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ವಿಚಾರಣೆ ನಡೆಸಿ ಬಂಧಿಸಿದ್ದಾರೆ. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಎಡಿಜಿಪಿ ದರ್ಜೆ ಅಧಿಕಾರಿ ಬಂಧನವಾದಂತಾಗಿದೆ.

ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ ಬಯಲಾಗುತ್ತಿದ್ದಂತೆ ಎಡಿಜಿಪಿ ಅಮೃತ್ ಪೌಲ್ ಅವರನ್ನು ಆಂತರಿಕ ಭದ್ರತಾ ವಿಭಾಗಕ್ಕೆ (ಐಎಸ್‌ಡಿ) ವರ್ಗಾಯಿಸಲಾಗಿತ್ತು. ಪೊಲೀಸ್ ನೇಮಕಾತಿ ವಿಭಾಗದ ಡಿವೈಎಸ್ಪಿ ಶಾಂತಕುಮಾರ್ ಸೇರಿದಂತೆ ಹಲವು ನೌಕರರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದರು. ಅವರೆಲ್ಲರ ವಿಚಾರಣೆಯಿಂದ ಅಮೃತ್ ಪೌಲ್ ಸಹ ಅಕ್ರಮದಲ್ಲಿ ಭಾಗಿಯಾಗಿದ್ದು ಮೇಲ್ನೋಟಕ್ಕೆ ಕಂಡುಬಂದಿತ್ತು.

ADVERTISEMENT

ಕಸ್ಟಡಿಗೆ ಪಡೆಯಲು ತಯಾರಿ: ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಅಮ್ರಿತ್ ಪೌಲ್ ಅವರನ್ನು ಕರೆತಂದಿರುವ ಸಿಐಡಿ ಅಧಿಕಾರಿಗಳು, ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.