ADVERTISEMENT

ಕೊಲೆ ಯತ್ನ ಪ್ರಕರಣ: ವಕೀಲ ಜಗದೀಶ್‌ಗೆ ಜಾಮೀನು

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2022, 11:43 IST
Last Updated 5 ಮಾರ್ಚ್ 2022, 11:43 IST
ವಕೀಲ ಜಗದೀಶ್
ವಕೀಲ ಜಗದೀಶ್   

ಬೆಂಗಳೂರು: ಕೊಲೆ ಯತ್ನ ಪ್ರಕರಣದಡಿ ಬಂಧಿಸಲಾಗಿರುವ ವಕೀಲ ಜಗದೀಶ್ ಕೆ.ಎನ್. ಮಹಾದೇವ್ ಅವರಿಗೆ ಜಾಮೀನು ಮಂಜೂರು ಮಾಡಿ ನಗರದ ನ್ಯಾಯಾಲಯ ಆದೇಶ ಹೊರಡಿಸಿದೆ.

ನ್ಯಾಯಾಲಯ ಆವರಣದಲ್ಲಿ ನಡೆದಿದ್ದ ಗಲಾಟೆ ಸಂಬಂಧ ಹಲಸೂರು ಗೇಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವಕೀಲರೊಬ್ಬರ ಮರ್ಮಾಂಗಕ್ಕೆ ಒದ್ದು ಕೊಲೆಗೆ ಯತ್ನಿಸಿದ ಆರೋಪದಡಿ ಜಗದೀಶ್ ಅವರನ್ನು ಪೊಲೀಸರು ಬಂಧಿಸಿದ್ದರು.

ಪ್ರಕರಣದಲ್ಲಿ ಜಾಮೀನು ಕೋರಿ ಜಗದೀಶ್ ಪರ ವಕೀಲರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

ADVERTISEMENT

ಇನ್ನೊಂದು ಪ್ರಕರಣದ ವಿಚಾರಣೆ ಮಾ. 7ಕ್ಕೆ: ಜಾತಿ ನಿಂದನೆ ಆರೋಪದಡಿ ಜಗದೀಶ್ ವಿರುದ್ಧ ಕೊಡಿಗೇಹಳ್ಳಿ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲೂ ಜಾಮೀನು ಕೋರಿ ಜಗದೀಶ್ ಪರ ವಕೀಲರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಾಲಯ, ವಾದ–‍ಪ್ರತಿವಾದ ಆಲಿಸಿದೆ. ಮುಂದಿನ ವಿಚಾರಣೆಯನ್ನು ಮಾ. 7ಕ್ಕೆ ಮುಂದೂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.