ADVERTISEMENT

ಪಠ್ಯ ಕ್ರಮದಲ್ಲಿ ಭಗವದ್ಗೀತೆ: ಸಮಿತಿ ರಚನೆ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2022, 19:41 IST
Last Updated 21 ಮಾರ್ಚ್ 2022, 19:41 IST
ಬಿ.ಸಿ. ನಾಗೇಶ್
ಬಿ.ಸಿ. ನಾಗೇಶ್   

ಬೆಂಗಳೂರು: ‘ಶಾಲಾ ಪಠ್ಯಪುಸ್ತಕಗಳಲ್ಲಿ ಭಗವದ್ಗೀತೆ ಅಳವಡಿಸುವ ಕುರಿತು ಮುಂದಿನ ದಿನಗಳಲ್ಲಿ ಸಮಿತಿ ರಚಿಸಲಾಗುವುದು’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ತಿಳಿಸಿದರು.

ವಿಧಾನ ಪರಿಷತ್‌ನಲ್ಲಿ ಸೋಮವಾರ ಶೂನ್ಯವೇಳೆಯಲ್ಲಿ ಬಿಜೆಪಿಯ ಎಂ.ಕೆ.ಪ್ರಾಣೇಶ್‌ ಅವರು, ‘2022–23ನೇ ಶೈಕ್ಷಣಿಕ ವರ್ಷದಿಂದ ಪಠ್ಯಪುಸ್ತಕಗಳಲ್ಲಿ ಭಗವದ್ಗೀತೆ ಪರಿಚಯಿಸಬೇಕು’ ಎಂದು ಒತ್ತಾಯಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ‘ಶಾಲೆಗಳಲ್ಲಿ ನೈತಿಕ ಶಿಕ್ಷಣ ಬೋಧಿಸುವುದು ಮುಖ್ಯವಾಗಿದೆ. ಜೀವನ ಅಂದರೆ ಏನು ಎನ್ನುವುದನ್ನು ಭಗವದ್ಗೀತೆಯ ಸಂದೇಶ ಸಾರುತ್ತದೆ. ಇಂತಹ ಶಿಕ್ಷಣ ಅವಶ್ಯಕತೆ ಇದೆ. ಮುಖ್ಯಮಂತ್ರಿ ಅವರ ಜತೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.