ADVERTISEMENT

18–44ರ ವಯಸ್ಸಿನವರಿಗೆ ಇಂದಿನಿಂದ ಕೋವಿಡ್‌ ಲಸಿಕೆ: ಸಚಿವ ಸುಧಾಕರ್‌

​ಪ್ರಜಾವಾಣಿ ವಾರ್ತೆ
Published 9 ಮೇ 2021, 18:01 IST
Last Updated 9 ಮೇ 2021, 18:01 IST
ಪ್ರಯಾಗ್‌ರಾಜ್‌ನಲ್ಲಿ ಯುವತಿಯೊಬ್ಬರು ಕೋವಿಡ್‌ ಲಸಿಕೆ ಹಾಕಿಸಿಕೊಳ್ಳುತ್ತಿರುವುದು–ಸಾಂದರ್ಭಿಕ ಚಿತ್ರ
ಪ್ರಯಾಗ್‌ರಾಜ್‌ನಲ್ಲಿ ಯುವತಿಯೊಬ್ಬರು ಕೋವಿಡ್‌ ಲಸಿಕೆ ಹಾಕಿಸಿಕೊಳ್ಳುತ್ತಿರುವುದು–ಸಾಂದರ್ಭಿಕ ಚಿತ್ರ   

ಬೆಂಗಳೂರು: ‘ರಾಜ್ಯದಾದ್ಯಂತ ನಿಗದಿತ ಸರ್ಕಾರಿ ಲಸಿಕಾ ಕೇಂದ್ರಗಳಲ್ಲಿ 18 ರಿಂದ 44 ವರ್ಷ ವಯೋಮಾನದವರಿಗೆ
ಸೋಮವಾರದಿಂದ (ಮೇ 10) ಕೋವಿಡ್ ಲಸಿಕೆ ನೀಡಲಾಗುವುದು’ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

‘ಬೆಂಗಳೂರಿನಲ್ಲಿ ಕೆ.ಸಿ. ಜನರಲ್, ಜಯನಗರ ಜನರಲ್, ಸರ್ ಸಿ.ವಿ. ರಾಮನ್ ಜನರಲ್, ಇಎಸ್‌ಐ ಮತ್ತು ನಿಮ್ಹಾನ್ಸ್ ಆಸ್ಪತ್ರೆಗಳಲ್ಲಿ ಮತ್ತು ಎಲ್ಲ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಈ ವಯೋಮಾನದವರಿಗೆ ಲಸಿಕೆ ನೀಡಲಾಗುವುದು. ಎಲ್ಲ ಜಿಲ್ಲೆಗಳಲ್ಲಿ ಮೊದಲ ಹಂತದಲ್ಲಿ ಜಿಲ್ಲಾಸ್ಪತ್ರೆ, ಸರ್ಕಾರಿ ವೈದ್ಯಕೀಯ ಕಾಲೇಜು ಹಾಗೂತಾಲ್ಲೂಕು ಆಸ್ಪತ್ರೆಗಳಲ್ಲಿ ಲಸಿಕೆ ನೀಡಲಾಗುವುದು’ ಎಂದರು.

‘ಸೀರಂ ಸಂಸ್ಥೆಯಿಂದ ಈವರೆಗೆ 6.5 ಲಕ್ಷ ಡೋಸ್ ಕೋವಿಶೀಲ್ಡ್‌ ಲಸಿಕೆ ಪಡೆಯಲಾಗಿದೆ. ಮೇ ಎರಡು ಅಥವಾ ಮೂರನೇ ವಾರದಲ್ಲಿ ಇನ್ನಷ್ಟು ಲಸಿಕೆ ಲಭ್ಯವಾಗುವ ನಿರೀಕ್ಷೆ ಇದೆ’ ಎಂದು ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.