ADVERTISEMENT

ರಾಜ್ಯದಲ್ಲಿ ಒಂದು ಲಕ್ಷ ಎಕರೆ ತಲುಪಲಿದೆ ನೈಸರ್ಗಿಕ ಕೃಷಿ

ಮಾರ್ಚ್ ಒಳಗೆ ಗುರಿ ತಲುಪುವ ನಿರೀಕ್ಷೆ: ಮುಖ್ಯಮಂತ್ರಿ ವಿಶ್ವಾಸ

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2022, 20:59 IST
Last Updated 6 ಅಕ್ಟೋಬರ್ 2022, 20:59 IST
   

ಬೆಂಗಳೂರು: ರಾಜ್ಯದ ಒಂದು ಲಕ್ಷ ಎಕರೆ ಜಮೀನನ್ನು 2023ರ ಮಾರ್ಚ್‌ ಒಳಗೆ ಸಂಪೂರ್ಣ ನೈಸರ್ಗಿಕ ಕೃಷಿಗೆ ಪರಿವರ್ತಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ನೈಸರ್ಗಿಕ ಮತ್ತು ಡಿಜಿಟಲ್ ಕೃಷಿ ಕುರಿತ ವಿಡಿಯೊ ಸಂವಾದದಲ್ಲಿ ಅವರು ಮಾಹಿತಿ ನೀಡಿದರು.

ಒಟ್ಟಾರೆ ರಾಜ್ಯದಲ್ಲಿ 2.4 ಲಕ್ಷ ಎಕರೆ ಸಾವಯವ ಕೃಷಿ ಭೂಮಿಯನ್ನು ನೈಸರ್ಗಿಕ ಕೃಷಿಗೆ ಪರಿವರ್ತಿಸುವ ಗುರಿ ಇದೆ.ನೈಸರ್ಗಿಕ ಕೃಷಿ ದೀರ್ಘಕಾಲಿಕ ಯೋಜನೆ. ಈ ಕುರಿತು ಸಂಶೋಧನೆ ಹಾಗೂ ಪ್ರಮಾಣೀಕರಣ ಅಗತ್ಯ ಎಂದು ತಿಳಿಸಿದರು.

ADVERTISEMENT

ರೈತರ ಆದಾಯ ದ್ವಿಗುಣಗೊಳಿಸುವಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ಮಹಾರಾಷ್ಟ್ರ ಹಾಗೂ ಗುಜರಾತ್ ರಾಜ್ಯಗಳೊಂದಿಗೆ ನೈಸರ್ಗಿಕ ಕೃಷಿ ಚಟುವಟಿಕೆ ಕಾರ್ಯದಲ್ಲಿ ರಾಜ್ಯವೂ ಸಕ್ರಿಯವಾಗಿದೆ.ನೈಸರ್ಗಿಕ ಕೃಷಿಗೆ 41,434 ಕೃಷಿಕರನ್ನು ಆಯ್ಕೆ ಮಾಡಲಾಗಿದೆ ಎಂದು ಅವರು ಹೇಳಿದರು.

ಕೃಷಿ ಕ್ಷೇತ್ರದ ಡಿಜಿಟಲೀಕರಣದಲ್ಲಿ ಮುಂಚೂಣಿಯಲ್ಲಿರುವ ರಾಜ್ಯ ಕರ್ನಾಟಕ.ಇದುವರೆಗೆ 78 ಲಕ್ಷ ರೈತರ ಜಮೀನುಗಳ ಸರ್ವೆ ನಂಬರ್ ಹಾಗೂ ಆಧಾರ್ ಜೋಡಣೆ ಮಾಡಲಾಗಿದೆ. 62 ಲಕ್ಷ ಕೃಷಿಕರು ಹಾಗೂ 16 ಲಕ್ಷ ಭೂ ರಹಿತರ ಮಾಹಿತಿಯನ್ನು ತಂತ್ರಾಂಶದಲ್ಲಿ ಸೇರಿಸಲಾಗಿದೆ ಎಂದರು.

‘ಫ್ರೂಟ್ಸ್’ ಯೋಜನೆಯನ್ನು ಎಲ್ಲಾ ರಾಜ್ಯಗಳೂ ಅಳವಡಿಸಿಕೊಳ್ಳುತ್ತಿವೆ. ಕೇಂದ್ರ ಸರ್ಕಾರದ ಸ್ವಾಮಿತ್ವ ಯೋಜನೆಯನ್ನು ಅಭಿಯಾನದ ಮಾದರಿಯಲ್ಲಿ ಕೈಗೊಳ್ಳಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.