ಬೆಂಗಳೂರು: ‘ಅಗ್ರಿ ಗೋಲ್ಡ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಪನಿಯ ಎಲ್ಲ ಸ್ಥಿರ ಮತ್ತು ಚರಾಸ್ತಿ ಮಾರಾಟಕ್ಕೆ ಕ್ರಮ ಕೈಗೊಳ್ಳಲಾಗಿದೆ’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.
ಈ ಕುರಿತಂತೆ ಮಂಗಳೂರಿನ ‘ಗ್ರಾಹಕರು ಮತ್ತು ಏಜೆಂಟರ ಕಲ್ಯಾಣ ಒಕ್ಕೂಟ’ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಬಿ.ಎಸ್. ಸಚಿನ್, ‘ಸರ್ಕಾರ ವಶಪಡಿಸಿಕೊಂಡಿರುವ ಆಸ್ತಿಯನ್ನು ಶೀಘ್ರವೇ ಮಾರಾಟ ಮಾಡಿ ಹಣ ಮರುಪಾವತಿಗೆ ನಿರ್ದೇಶಿಸಬೇಕು’ ಎಂದು ಕೋರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.