ADVERTISEMENT

ಕೃಷಿ ವಿ.ವಿ: ಶೇ 45 ರಷ್ಟು ಬೋಧಕ ಹುದ್ದೆಗಳು ಖಾಲಿ

​ಪ್ರಜಾವಾಣಿ ವಾರ್ತೆ
Published 30 ಜೂನ್ 2021, 21:15 IST
Last Updated 30 ಜೂನ್ 2021, 21:15 IST
   

ಬೆಂಗಳೂರು: ರಾಜ್ಯದ ಕೃಷಿ ವಿಶ್ವವಿದ್ಯಾಲಯಗಳಲ್ಲಿ ಶೇ 45ರಷ್ಟು ಬೋಧಕ ಮತ್ತು ಶೇ 55ರಷ್ಟು ಬೋಧಕೇತರ ಹುದ್ದೆಗಳ ಕೊರತೆ ಇದ್ದು, ಅವುಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಬೇಕು ಎಂದು ವಿವಿಧ ಕೃಷಿ ವಿಶ್ವವಿದ್ಯಾಲಯಗಳ ಕುಲಪತಿಗಳು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.

ಅಲ್ಲದೆ, ವಿಶ್ವವಿದ್ಯಾಲಯಗಳಲ್ಲಿ ಶಿಕ್ಷಣ ಮತ್ತು ಸಂಶೋಧನೆಗೆ 2016–17 ರಿಂದ ಈಚೆಗೆ ಶೇ 65ರಷ್ಟು ಅನುದಾನ ಕಡಿತಗೊಂಡಿದೆ ಎಂದೂ ಅವರು ಮುಖ್ಯಮಂತ್ರಿ ಗಮನಕ್ಕೆ ತಂದರು.

ಮಾನವ ಸಂಪನ್ಮೂಲ ಕೊರತೆ ವಿದ್ಯಾರ್ಥಿಗಳ ಕಲಿಕೆಯ ಮೇಲೂ ಪರಿಣಾಮ ಬೀರುತ್ತಿದೆ ಎಂದು ನಿಯೋಗದ ನೇತೃತ್ವ ವಹಿಸಿದ್ದ ಕೃಷಿ ಸಚಿವ ಬಿ.ಸಿ.ಪಾಟೀಲ ಅವರು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.