ADVERTISEMENT

ಕೃಷಿ ಇಲಾಖೆ: 300 ಹುದ್ದೆಗಳಿಗೆ ನೇರ ನೇಮಕಾತಿ

​ಪ್ರಜಾವಾಣಿ ವಾರ್ತೆ
Published 18 ಮೇ 2022, 20:43 IST
Last Updated 18 ಮೇ 2022, 20:43 IST

ಬೆಂಗಳೂರು: ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳ ಪೈಕಿ 300 ಹುದ್ದೆಗಳನ್ನು ನಿಯಮಾನುಸಾರ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದ್ದಾರೆ.

ಖಾಲಿ ಇರುವ ಹುದ್ದೆಗಳನ್ನು ಆದಷ್ಟು ಬೇಗ ಭರ್ತಿ ಮಾಡಲು ಒಪ್ಪಿಗೆ ನೀಡುವಂತೆ ಆರ್ಥಿಕ ಇಲಾಖೆಗೆ ಮನವಿ ಮಾಡಲಾಗಿತ್ತು. ಅದರಂತೆ ಆರ್ಥಿಕ ಇಲಾಖೆ ಈಗ ಒಪ್ಪಿಗೆ ಸೂಚಿಸಿದೆ. 300 ಹುದ್ದೆಗಳನ್ನು ಕರ್ನಾಟಕ ಕೃಷಿ ಸೇವೆಗಳು(ವೃಂದ ಮತ್ತು ನೇಮಕಾತಿ) ನಿಯಮಗಳು, 2021ರಲ್ಲಿ ನಿಗದಿಪಡಿಸಿರುವ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಕ್ರಮ ಕೈಗೊಳ್ಳುವಂತೆ ಕೃಷಿ ಇಲಾಖೆ ಆಯುಕ್ತರಿಗೆ ನಿರ್ದೇಶಿಸಲಾಗಿದೆ ಎಂದು ತಿಳಿಸಿದರು.

ಕೃಷಿ ಪದವೀಧರರಿಗೆ ಶೇ 85, ಉಳಿದ ಶೇ 15 ಹುದ್ದೆಗಳನ್ನು ಬಿ.ಟೆಕ್‌ (ಕೃಷಿ ಎಂಜಿನಿಯರಿಂಗ್‌) ಅಥವಾ ಬಿ.ಟೆಕ್‌ (ಆಹಾರ ತಂತ್ರಜ್ಞಾನ/ ಆಹಾರ ವಿಜ್ಞಾನ ಮತ್ತು ತಂತ್ರಜ್ಞಾನ) ಅಥವಾ ಬಯೋಟೆಕ್ನಾಲಜಿ ಹೊಂದಿರುವವರು ಅರ್ಜಿ ಸಲ್ಲಿಸಲು ಅರ್ಹತೆ ಪಡೆದಿರುತ್ತಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.