ADVERTISEMENT

‘ಒಟ್ಟಿಗೆ ಇದ್ದೇವೆ; ಮುಂದೆಯೂ ಒಟ್ಟಿಗೆ ಇರುತ್ತೇವೆ’: ಬಿ.ಸಿ.ಪಾಟೀಲ್‌

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2020, 9:52 IST
Last Updated 3 ಡಿಸೆಂಬರ್ 2020, 9:52 IST
   

ಮಡಿಕೇರಿ: ‘ಎಚ್‌. ವಿಶ್ವನಾಥ್‌ ಅವರ ಜೊತೆಗೆ ನಾವೆಲ್ಲರೂ ಇದ್ದೇವೆ. ಮುಂದೆಯೂ ಇರುತ್ತೇವೆ. ಅವರು ಒಂಟಿಯಲ್ಲ’ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್‌ ಹೇಳಿದರು.

ಪೊನ್ನಂಪೇಟೆಯಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಅವರು, ‘ವಿಶ್ವನಾಥ್‌ ಪ್ರಕರಣದಲ್ಲಿ ಹೈಕೋರ್ಟ್‌ನಿಂದ ಆದೇಶ ಬಂದಿದೆ. ಈ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಲಿದ್ದೇವೆ’ ಎಂದು ಹೇಳಿದರು.

‘ಮಳೆ ಬಡಿದ ಮಗಳಂತೆ 17 ಮಂದಿ ಬಿಜೆಪಿಗೆ ಬಂದಿದ್ದೇವೆ. ಈಗ ಮಗಳನ್ನು ಸೊಸೆಯಂತೆ ನೋಡಿಕೊಳ್ಳುತ್ತಾರೆ. ಬಿಜೆಪಿಯಲ್ಲಿ ವಲಸಿಗರು, ಮೂಲ ಬಿಜೆಪಿಯವರು ಎಂಬ ತಾರತಮ್ಯ ಇಲ್ಲ. ಎಚ್‌.ವಿಶ್ವನಾಥ್ ಅವರಿಗೆ ಬಿಜೆಪಿ ಅಥವಾ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಂದ ಯಾವುದೇ ತೊಂದರೆ ಆಗಿಲ್ಲ. ವಿಶ್ವನಾಥ್‌ ಸೋತರೂ ಅವರನ್ನು ವಿಧಾನ ಪರಿಷತ್‌ ಸದಸ್ಯರನ್ನಾಗಿ ಮಾಡಲಾಗಿದೆ. ಭವಿಷ್ಯದಲ್ಲೂ ಅವರ ಹೋರಾಟಕ್ಕೆ ನಾವು ಕೈಜೋಡಿಸಲಿದ್ದೇವೆ’ ಎಂದು ಪ್ರತಿಕ್ರಿಯಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.