ADVERTISEMENT

‘ರೈತರೊಂದಿಗೆ ಒಂದು ದಿನ’ ಕಾರ್ಯಕ್ರಮ ಮುಂದುವರಿಸಲು ನಿರ್ಧಾರ: ಬಿ.ಸಿ.ಪಾಟೀಲ

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2021, 19:45 IST
Last Updated 30 ಆಗಸ್ಟ್ 2021, 19:45 IST
ಬಿ.ಸಿ.ಪಾಟೀಲ
ಬಿ.ಸಿ.ಪಾಟೀಲ   

ಬೆಂಗಳೂರು: ರೈತರಿಗೆ ಆತ್ಮಸ್ಥೈರ್ಯ ತುಂಬಲು ಆರಂಭಿಸಿದ್ದ ‘ರೈತರೊಂದಿಗೆ ಒಂದು ದಿನ’ ಕಾರ್ಯಕ್ರಮವನ್ನು ಮುಂದುವರಿಸಲು ಕೃಷಿ ಸಚಿವ ಬಿ.ಸಿ.ಪಾಟೀಲ ನಿರ್ಧರಿಸಿದ್ದಾರೆ.

‘ಕೋವಿಡ್ ಕಾರಣ ರೈತರ ಜೊತೆ ಕಾಲ ಕಳೆಯಲು ಸಾಧ್ಯವಾಗಿಲ್ಲ. ಇದೀಗ ಕೋವಿಡ್ ಜೊತೆಗೆ ಬದುಕಬೇಕಾದ ಪರಿಸ್ಥಿತಿ ಇದೆ. ಹೀಗಾಗಿ, ಮತ್ತೆ ರೈತರೊಂದಿಗೆ ಒಂದು ದಿನ ಕಳೆಯಲು ನಿರ್ಧರಿಸಿದ್ದೇನೆ’ ಎಂದು ಅವರು ತಿಳಿಸಿದರು.

‘ರೈತರಲ್ಲಿ ಆತ್ಮವಿಶ್ವಾಸ ತುಂಬುವುದು ಮತ್ತು ಮಿಶ್ರ ಬೆಳೆ ಮೂಲಕ ಆದಾಯದ ದ್ವಿಗುಣಗೊಳಿಸುವಂತೆ ಪ್ರೋತ್ಸಾಹ ನೀಡುವುದು ಕಾರ್ಯಕ್ರಮದ ಉದ್ದೇಶ. ಸಾಧ್ಯವಾದ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸಲಾಗುವುದು’ ಎಂದರು.

ADVERTISEMENT

‘ಕೆಲವು ಕಡೆ ಮಳೆ ಕೈ ಕೊಟ್ಟರೂ ಒಣ ಬೆಳೆಗಳಿಗೆ ಸಮಸ್ಯೆ ಆಗಿಲ್ಲ. ಬೀಜ, ಗೊಬ್ಬರದ ಸಮಸ್ಯೆ ಈ ವರ್ಷ ಇಲ್ಲ’ ಎಂದೂ ಪಾಟೀಲ ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.