ADVERTISEMENT

ರೈತರು ಅನಾಮಧೇಯ ಬಿತ್ತನೆ ಬೀಜ, ರಸಗೊಬ್ಬರ ಖರೀದಿಸಬಾರದು: ಬಿ.ಸಿ.ಪಾಟೀಲ

​ಪ್ರಜಾವಾಣಿ ವಾರ್ತೆ
Published 27 ಆಗಸ್ಟ್ 2020, 8:15 IST
Last Updated 27 ಆಗಸ್ಟ್ 2020, 8:15 IST
ಬಿ.ಸಿ.ಪಾಟೀಲ
ಬಿ.ಸಿ.ಪಾಟೀಲ   

ಬೆಂಗಳೂರು: ಅನಾಮಧೇಯ ಕಂಪೆನಿ ಹೆಸರಿನಲ್ಲಿ ರಸಗೊಬ್ಬರವಾಗಲೀ, ಬಿತ್ತನೆಬೀಜವಾಗಲೀ ಮನೆಬಾಗಿಲಿಗೆ ಬಂದರೆ ಅಥವಾ ಯಾರಾದರೂ ನೀಡಿದರೆ ರೈತರು ಅದನ್ನು ಖರೀದಿಸಬಾರದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲಸ್ಪಷ್ಟಪಡಿಸಿದ್ದಾರೆ.

‘ಕೆಲವು ಒಳಸಂಚುಗಳು ಅನಾಮಧೇಯ ಕಂಪೆನಿ ರೈತರ ಮನೆಬಾಗಿಲಿಗೆ ಬಿತ್ತನೆ ಬೀಜ ರಸಗೊಬ್ಬರ ಸರಬರಾಜು ಮಾಡುತ್ತಿರುವುದು ತಮ್ಮ ಗಮನಕ್ಕೆ ಬಂದಿದ್ದು, ಇಲಾಖೆ ಈ ಬಗ್ಗೆ ನಿಗಾ ಹಿಸಿದೆ. ರೈತರಿಗೆ ಅನ್ಯಾಯವಾಗುವಂತಹ ಯಾವುದೇ ಮೋಸವನ್ನಾಗಲೀ ನಕಲಿ ಜಾಲವನ್ನಾಗಲೀ ತಾವು ಎಂದಿಗೂ ಸಹಿಸುವುದಿಲ್ಲ. ಈ ಬಗ್ಗೆ ಸೂಕ್ತ ಕ್ರಮ ವಹಿಸಲಾಗುವುದು’ ಎಂದರು.

ರೈತರು ಆದಷ್ಟು ಅಧಿಕೃತ ಕಂಪೆನಿಗಳ ಇಲಾಖೆ ರೈತಸಂಪರ್ಕ ಕೇಂದ್ರ ಸೂಚಿಸಿದ ಬಿತ್ತನೆ ಬೀಜ ರಾಸಾಯನಿಕ ಗೊಬ್ಬರ ಔಷಧಿಗಳನ್ನೇ ಖರೀದಿಸಿ ಬಳಸಬೇಕು. ಇಂತಹ ಯಾವುದೇ ಅನಾಮಧೇಯ ಪ್ಯಾಕೆಟ್ ಬಂದಲ್ಲಿ ಅಥವಾ ಯಾರಾದರೂ ನೀಡಿದಲ್ಲಿ ಆ ಬಗ್ಗೆ ರೈತರು ಹಾಗೂ ಜನರು ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಕೃಷಿ ಇಲಾಖೆಯನ್ನು ಸಂಪರ್ಕಿಸಿ ಮಾಹಿತಿ ನೀಡಬೇಕೆಂದು ಮನವಿ ಮಾಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.