ನವದೆಹಲಿ: ‘ಎನ್‌ಡಿಎ ಮೈತ್ರಿಕೂಟದ ಸರ್ಕಾರದಲ್ಲಿ ಕೃಷಿ ಖಾತೆ ವಹಿಸಿಕೊಳ್ಳುವ ಬಗ್ಗೆ ತಮ್ಮ ಪಕ್ಷ ಆಸಕ್ತಿ ಹೊಂದಿದೆ’ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಸಂಸದ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.
ಎನ್‌ಡಿಎ ಮೈತ್ರಿಕೂಟದ ಸಭೆಯಲ್ಲಿ ಭಾಗಿಯಾಗಲು ಬುಧವಾರ ರಾಷ್ಟ್ರ ರಾಜಧಾನಿಗೆ ಬಂದಿರುವ ಅವರು ಸುದ್ದಿಗಾರರ ಜತೆಗೆ ಮಾತನಾಡಿ, ‘ಮೊದಲಿನಿಂದಲೂ ನಮ್ಮ ಪಕ್ಷ ರೈತರ ಹಿತಾಸಕ್ತಿ ಕಾಪಾಡಲು ಹೋರಾಡುತ್ತಿದೆ. ಇಂತಹ ಖಾತೆ ಬೇಕೆಂದು ಬೇಡಿಕೆ ಇಡುತ್ತಿಲ್ಲ. ಎನ್‌ಡಿಎ ನಾಯಕತ್ವ ಏನು ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡೋಣ’ ಎಂದರು.
‘ರಾಜ್ಯದ ಹಲವಾರು ಸಮಸ್ಯೆಗಳು ಹಲವಾರು ವರ್ಷಗಳಿಂದ ಇತ್ಯರ್ಥವಾಗದೆ ಹಾಗೆಯೇ ಉಳಿದಿವೆ. ಕೇಂದ್ರ ಸರ್ಕಾರದ ಸಹಕಾರದಿಂದ ಈ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದಕ್ಕೆ ಆದ್ಯತೆ ನೀಡುತ್ತೇವೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.