
ಪ್ರಜಾವಾಣಿ ವಾರ್ತೆ
ನವದೆಹಲಿ: ಎಐಸಿಸಿ ಪರಿಶಿಷ್ಟ ಜಾತಿ (ಎಸ್‌ಟಿ) ಘಟಕಕ್ಕೆ 45 ರಾಷ್ಟ್ರೀಯ ಸಂಯೋಜಕರನ್ನು ನೇಮಿಸಲಾಗಿದೆ.
ಕರ್ನಾಟಕದಿಂದ ವಿಧಾನಪರಿಷತ್ ಸದಸ್ಯ ಎಫ್.ಎಚ್. ಜಕ್ಕಪ್ಪನವರ್, ಕೆಪಿಸಿಸಿ ಕಾರ್ಯದರ್ಶಿ ಆನಂದ ಕುಮಾರ್ ಅವರನ್ನು ಮಹಾರಾಷ್ಟ್ರದ ಸಂಯೋಜಕರನ್ನಾಗಿ ಎಐಸಿಸಿ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ರಾಜೇಂದ್ರ ಪಾಲ್ ಗೌತಮ್ ನೇಮಕ ಮಾಡಿದ್ದಾರೆ.
ದಲಿತ ಸಮುದಾಯಕ್ಕೆ ಸಂಬಂಧಪಟ್ಟ ವಿಷಯಗಳಲ್ಲಿ ಸಂಘಟನೆ ಮಾಡಬೇಕು. ಜೊತೆಗೆ, ಶೋಷಿತರ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿ, ಪರಿಶಿಷ್ಟರನ್ನು ಪಕ್ಷದತ್ತ ಸೆಳೆಯಲು ಸೂಕ್ತ ಕಾರ್ಯತಂತ್ರ ರೂಪಿಸಬೇಕು. ಪ್ರತಿ ತಿಂಗಳಿಗೊಮ್ಮೆ ತಮ್ಮ ಕಾರ್ಯಚಟುವಟಿಕೆ ಬಗ್ಗೆ ಎಐಸಿಸಿಗೆ ವರದಿ ನೀಡಬೇಕು ಎಂದು ನೇಮಕಾತಿ ಪತ್ರದಲ್ಲಿ ತಿಳಿಸಲಾಗಿದೆ.