ADVERTISEMENT

ವಾರಿಸ್ ಪಠಾಣ್‌ಗೆ ನೋಟಿಸ್ ಜಾರಿ

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2020, 18:16 IST
Last Updated 23 ಫೆಬ್ರುವರಿ 2020, 18:16 IST

ಕಲಬುರ್ಗಿ: ಪ್ರಚೋದನಾಕಾರಿ ಭಾಷಣ ಮಾಡಿದ ಎಐಎಂಐಎಂ ಪಕ್ಷದ ವಕ್ತಾರ, ಮಾಜಿ ಶಾಸಕ ವಾರಿಸ್ ಪಠಾಣ್ ಅವರಿಗೆ ವಿಚಾರಣೆ ಹಾಜರಾಗುವಂತೆ ಕಲಬುರ್ಗಿ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದಾರೆ.

ಖುದ್ದಾಗಿ ನೋಟಿಸ್ ತಲುಪಿಸಲು ಗ್ರಾಮೀಣ ಠಾಣೆ ಪಿಎಸ್‍ಐ ಮುಂಬೈಗೆ ತೆರಳಿದ್ದಾರೆ. ನೋಟಿಸ್ ತಲುಪಿದ 7 ದಿನಗಳೊಳಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸಿಎಎ, ಎನ್‍ಆರ್‌ಸಿ, ಎನ್‌ಸಿಆರ್‌ ವಿರೋಧಿಸಿ ಫೆ.15ರಂದು ಎಐಎಂಐಎಂ ಪಕ್ಷದ ಸಂಸ್ಥಾಪಕ, ಸಂಸದ ಅಸಾದುದ್ದೀನ್‌ ಒವೈಸಿ ನೇತೃತ್ವದಲ್ಲಿ ಕಲಬುರ್ಗಿಯ ಪೀರ್ ಬಂಗಾಲಿ ಮೈದಾನದಲ್ಲಿ ಎಐಎಂಐಎಂ ಪಕ್ಷ ಆಯೋಜಸಿದ್ದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಪಠಾಣ ವಿರುದ್ಧ ಇಲ್ಲಿನ ಗ್ರಾಮೀಣ ಠಾಣೆಯಲ್ಲಿ ಬಿಜೆಪಿ ಮಹಿಳಾ ಘಟಕ ಉಪಾಧ್ಯಕ್ಷೆ ಶ್ವೇತಾಸಿಂಗ್ ರಾಠೋಡ ದೂರು ದಾಖಲಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.