ADVERTISEMENT

ಸಮ್ಮೇಳನ: ಜನಸಾಮಾನ್ಯರ ಮನೆಯಲ್ಲಿ ವಾಸ್ತವ್ಯ -ಕಸಾಪ ಅಧ್ಯಕ್ಷ ಘೋಷಣೆ

ಕಸಾಪ ಅಧ್ಯಕ್ಷ ಮಹೇಶ ಜೋಶಿ ಘೋಷಣೆ

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2022, 22:31 IST
Last Updated 21 ಡಿಸೆಂಬರ್ 2022, 22:31 IST
ಮಹೇಶ ಜೋಶಿ
ಮಹೇಶ ಜೋಶಿ   

ಬೆಂಗಳೂರು: ‘ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಕನ್ನಡಿಗರ ಜಾತ್ರೆಯಾಗಬೇಕು. ಆ ಕಾರಣ ಹಾವೇರಿಯ ಜನಸಾಮಾನ್ಯರ ಮನೆಯಲ್ಲಿ ವಾಸ್ತವ್ಯ ಮಾಡುತ್ತೇನೆ’ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಅಧ್ಯಕ್ಷ ಮಹೇಶ ಜೋಶಿ ತಿಳಿಸಿದ್ದಾರೆ.

‘2023ರ ಜ. 6, 7 ಹಾಗೂ 8ರಂದು ಹಾವೇರಿಯಲ್ಲಿ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ. ಜ.4ರಿಂದ ಜ.8ರವರೆಗೆ ಹಾವೇರಿಯಲ್ಲಿ ವಾಸ್ತವ್ಯ ಮಾಡಲಿದ್ದೇನೆ. ಸಮ್ಮೇಳನ ನಡೆಯುವ ಸ್ಥಳಕ್ಕೆ ಹತ್ತಿರ ಇರುವ ಅಜ್ಜಯ್ಯನ ಗುಡಿಯಸುತ್ತಮುತ್ತಲಿನ ಯಾವುದಾದರೂ ಒಂದು ಮನೆಯಲ್ಲಿ ಉಳಿದುಕೊಳ್ಳಲು ನಿರ್ಧಾರ ಮಾಡಿದ್ದೇನೆ. ಹಾವೇರಿ ನನ್ನ ತವರೂರಾಗಿದ್ದು, ಅಲ್ಲಿನ ಯಾವುದೇ ಮನೆಯಲ್ಲಿ ಇದ್ದರೂ ಅದು ನನ್ನ ಮನೆ ಎಂದೇ ಭಾವಿಸುತ್ತೇನೆ’ ಎಂದು ಹೇಳಿದ್ದಾರೆ.

‘ಹಾವೇರಿಯ ಜನರ ಮನೆಯಲ್ಲಿ ವಾಸ್ತವ್ಯ ಮಾಡಿ, ಅವರಿಗೆ ಇನ್ನಷ್ಟು ಹತ್ತಿರ ಆಗಬೇಕು ಎಂಬ ಅಪೇಕ್ಷೆ ನನ್ನದು. ಸಮ್ಮೇಳನ ನಡೆಯುವ ಸ್ಥಳದ ಹತ್ತಿರ ಇರುವ ಅಜ್ಜಯ್ಯನ ದೇವಸ್ಥಾನದ ಸುತ್ತಮುತ್ತ ಇರುವ ಯಾವುದಾದರೂ ಮನೆಯವರು ವಾಸ್ತವ್ಯಕ್ಕೆ ಅನುಕೂಲ ಮಾಡಿಕೊಡಲು ಇಚ್ಛಿಸಿದಲ್ಲಿ, ತಮ್ಮ ಮನೆಯ ವಿಳಾಸ ನೀಡಬಹುದು’ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.