ಅಕೈ ಪದ್ಮಶಾಲಿ
ಬೆಂಗಳೂರು: ಲಿಂಗತ್ವ ಅಲ್ಪಸಂಖ್ಯಾತರ ಸಮುದಾಯದ ಹಕ್ಕುಗಳ ಹೋರಾಟಗಾರ್ತಿ ಹಾಗೂ ಕೆಪಿಸಿಸಿ ಉಪಾಧ್ಯಕ್ಷೆ ಅಕ್ಕೈ ಪದ್ಮಶಾಲಿ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಪತ್ರ ಬರೆದಿರುವ ಅವರು, ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದು ಕೂಡಲೇ ಅಂಗೀಕರಿಸಬೇಕು ಎಂದು ಮನವಿ ಮಾಡಿದ್ದಾರೆ.
ಲಿಂಗತ್ವ ಅಲ್ಪಸಂಖ್ಯಾತರ ಸಮುದಾಯವು ಸಾಮಾಜಿಕ, ಆರ್ಥಿಕ, ರಾಜಕೀಯ, ಶೈಕ್ಷಣಿಕ, ಕಾನೂನು, ಮೂಲಭೂತ ಹಕ್ಕುಗಳು, ನೀತಿ ನಿರೂಪಣೆಯ ನೆಲಗಟ್ಟಿನಿಂದ ಹಿಂದುಳಿದಿದೆ. ಸಮುದಾಯವನ್ನು ಸಂಘಟಿಸುವ ಕಾರಣಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.