ADVERTISEMENT

ಅಕ್ಕಮಹಾದೇವಿ ಮಹಿಳಾ ವಿವಿ: ಪ್ರಭಾರ ಕುಲಪತಿಯಾಗಿ ಪ್ರೊ.ಕಾಕಡೆ ನೇಮಕ

​ಪ್ರಜಾವಾಣಿ ವಾರ್ತೆ
Published 19 ಜೂನ್ 2020, 14:55 IST
Last Updated 19 ಜೂನ್ 2020, 14:55 IST
ಓಂಕಾರ ಕಾಕಡೆ
ಓಂಕಾರ ಕಾಕಡೆ   

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಹಾಲಿ ಕುಲಪತಿ ಪ್ರೊ.ಸಬಿಹಾ ಭೂಮಿಗೌಡ ಅವರು ನಾಲ್ಕು ವರ್ಷಗಳ ಸೇವೆಯ ನಂತರ ಶುಕ್ರವಾರ ನಿವೃತ್ತರಾದ ಹಿನ್ನೆಲೆಯಲ್ಲಿ ಪ್ರಭಾರ ಕುಲಪತಿಯಾಗಿ ಸಮಾಜ ವಿಜ್ಞಾನ ನಿಕಾಯದ ಡೀನ್ ಪ್ರೊ.ಓಂಕಾರ ಕಾಕಡೆ ಅವರನ್ನು ನೇಮಕ ಮಾಡಿ ವಿವಿಯ ಕುಲಾಧಿಪತಿಯೂ ಆಗಿರುವ ರಾಜ್ಯಪಾಲ ವಜುಬಾಯಿ ವಾಲಾ ಆದೇಶ ಹೊರಡಿಸಿದ್ದಾರೆ.

ಕಾಕಡೆ ಅವರ ಅಧಿಕಾರ ಅವಧಿ ಜೂನ್‌ 20 ರಿಂದ ಡಿಸೆಂಬರ್‌ 13ರ ವರೆಗೆ ಅಥವಾ ನೂತನ ಕುಲಪತಿ ನೇಮಕ ಆಗುವವರೆಗೆ ಇರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಅಧಿಕಾರ ಹಸ್ತಾಂತರ:ಪ್ರೊ.ಸಬಿಹಾ ಭೂಮಿಗೌಡ ಅವರು ಪ್ರಭಾರ ಕುಲಪತಿ ಪ್ರೊ.ಓಂಕಾರ ಕಾಕಡೆ ಅವರಿಗೆ ಶುಕ್ರವಾರ ಅಧಿಕಾರ ಹಸ್ತಾಂತರಿಸಿದರು.

ADVERTISEMENT

ಸೇವೆಯಿಂದ ನಿವೃತ್ತರಾದ ಪ್ರೊ.ಸಬಿಹಾ ಅವರನ್ನು ವಿಶ್ವವಿದ್ಯಾಲಯದಿಂದ ಸನ್ಮಾನಿಸಿ, ಬೀಳ್ಕೊಡಲಾಯಿತು. ಪ್ರೊ.ಸಬಿಹಾ ಅವರು ತಮ್ಮ ಮಾತೃ ಸಂಸ್ಥೆ ಮಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಯನ ಪೀಠಕ್ಕೆ ಮರಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.