ADVERTISEMENT

ಆಲಮಟ್ಟಿ: 1.8 ಲಕ್ಷ ಕ್ಯುಸೆಕ್‌ ನೀರು ಹೊರಕ್ಕೆ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2020, 19:32 IST
Last Updated 7 ಆಗಸ್ಟ್ 2020, 19:32 IST
ಆಲಮಟ್ಟಿ ಜಲಾಶಯದಿಂದ 1.80 ಲಕ್ಷ ಕ್ಯುಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ. ಶುಕ್ರವಾರ ಜಲಾಶಯ ಸೀತಮ್ಮನಗಿರಿ ಭಾಗದಿಂದ ಕಾಣುತ್ತಿರುವುದು ಪ್ರಜಾವಾಣಿ ಚಿತ್ರ: ಚಂದ್ರಶೇಖರ ಕೋಳೇಕರ
ಆಲಮಟ್ಟಿ ಜಲಾಶಯದಿಂದ 1.80 ಲಕ್ಷ ಕ್ಯುಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ. ಶುಕ್ರವಾರ ಜಲಾಶಯ ಸೀತಮ್ಮನಗಿರಿ ಭಾಗದಿಂದ ಕಾಣುತ್ತಿರುವುದು ಪ್ರಜಾವಾಣಿ ಚಿತ್ರ: ಚಂದ್ರಶೇಖರ ಕೋಳೇಕರ   
""

ಆಲಮಟ್ಟಿ (ವಿಜಯಪುರ): ಮಹಾರಾಷ್ಟ್ರದ ಪಶ್ಚಿಮಘಟ್ಟ ಹಾಗೂ ಕರ್ನಾಟಕದ ಕೃಷ್ಣಾ ಕಣಿವೆಯಲ್ಲಿ ಸುರಿಯುತ್ತಿರುವ ಮಳೆಯ ಕಾರಣ ಆಲಮಟ್ಟಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಶುಕ್ರವಾರ 1,50,000 ಕ್ಯುಸೆಕ್‌ಗೆ ಏರಿಕೆಯಾಗಿದೆ.

ಜಲಾಶಯದ ಎಲ್ಲ 26 ಗೇಟ್‌ಗಳು ಹಾಗೂ ಜಲಾಶಯದ ಬಲಭಾಗದ ಆಲಮಟ್ಟಿ ವಿದ್ಯುತ್ ಉತ್ಪಾದನಾ ಕೇಂದ್ರದ ಮೂಲಕ ಸೇರಿದಂತೆ ಒಟ್ಟಾರೆ 1,80,000 ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗುತ್ತದೆ.ಪ್ರವಾಹ ಪರಿಸ್ಥಿತಿಯ ನಿಯಂತ್ರಣಕ್ಕಾಗಿ ಮುಂಜಾಗ್ರತೆಯಾಗಿ ಹೊರಹರಿವು ಹೆಚ್ಚಿಸಲಾಗಿದ್ದು, 519.60 ಮೀ ಗರಿಷ್ಠ ಎತ್ತರದ ಜಲಾಶಯದಲ್ಲಿ 517.95 ಮೀ.ವರೆಗೆ ನೀರು ಸಂಗ್ರಹವಾಗಿದೆ. ಈ ವರ್ಷದಲ್ಲಿ ಇದೇ ಮೊದಲ ಬಾರಿಗೆ ಎಲ್ಲಾ ಗೇಟ್‌ ತೆರೆದು ನೀರನ್ನು ಬಿಡಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT