
ಪಿಟಿಐ
ಬಂಧನ (ಸಾಂದರ್ಭಿಕ ಚಿತ್ರ)
ಬೆಂಗಳೂರು: 2023ರ ವಿಧಾನಸಭೆ ಚುನಾವಣೆಯಲ್ಲಿ ಆಳಂದ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳವು ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ಓರ್ವನನ್ನು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
27 ವರ್ಷದ ವ್ಯಕ್ತಿಯನ್ನು ಬುಧವಾರ ಬಂಧಿಸಲಾಗಿದ್ದು ಆತನನ್ನು ಬೆಂಗಳೂರಿಗೆ ಕರೆತರಲಾಗಿದೆ. ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ಆಳಂದ ಕ್ಷೇತ್ರದಲ್ಲಿ ಹಲವು ಮತಗಳನ್ನು ಅಳಿಸಿ ಹಾಕಲು ಆತ ಅರ್ಜಿ ಸಲ್ಲಿಸಿದ್ದ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.