ADVERTISEMENT

ಗೋಡೆ ಕೊರೆದು ಮದ್ಯ ಕಳವು

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2020, 20:43 IST
Last Updated 3 ಏಪ್ರಿಲ್ 2020, 20:43 IST
ಬಂಗಾರಪೇಟೆ ತಾಲ್ಲೂಕಿನ ಸೂಲಿಕುಂಟೆ ಬಳಿ ಎಂಎಸ್ಐಎಲ್ ಮದ್ಯ ಮಾರಾಟ ಮಳಿಗೆಗೆ ಕನ್ನ ಕೊರೆದಿರುವುದು
ಬಂಗಾರಪೇಟೆ ತಾಲ್ಲೂಕಿನ ಸೂಲಿಕುಂಟೆ ಬಳಿ ಎಂಎಸ್ಐಎಲ್ ಮದ್ಯ ಮಾರಾಟ ಮಳಿಗೆಗೆ ಕನ್ನ ಕೊರೆದಿರುವುದು   

ಬಂಗಾರಪೇಟೆ: ತಾಲ್ಲೂಕಿನ ಸೂಲಿಕುಂಟೆ ಗ್ರಾಮದ ತೋಟದಲ್ಲಿದ್ದ ಎಂಎಸ್ಐಎಲ್ ಮದ್ಯ ಮಾರಾಟ ಮಳಿಗೆಗೆ ಕನ್ನಹಾಕಿ ₹1.45 ಲಕ್ಷ ಮೌಲ್ಯದ ಮದ್ಯ ಕಳವು ಮಾಡಲಾಗಿದೆ.

24 ಕೇಸ್ ಐಎಂಎಲ್, 10 ಕೇಸ್ ಬಿಯರ್ ಸೇರಿದಂತೆ 34 ಕೇಸ್ ಕಳುವಾಗಿದೆ. ಲಾಕ್‌ಡೌನ್ ಹಿನ್ನೆಲೆಯಲ್ಲಿ 15 ದಿನದಿಂದ ಮದ್ಯದ ಅಂಗಡಿಯನ್ನು ಮುಚ್ಚಲಾಗಿತ್ತು. ಮದ್ಯ ಸಿಗದೆ ಮದ್ಯಪ್ರಿಯರು ಕನ್ನ ಹಾಕಿರಬಹುದು ಎಂದು ಶಂಕಿಸಲಾಗಿದೆ. ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT