ADVERTISEMENT

ಪಕ್ಷಾಂತರ ನಿಷೇಧ ಕಾಯಿದೆ: ಮೇ 28ರಂದು ಸಂಸದೀಯ ಗಣ್ಯರ ಸಭೆ

​ಪ್ರಜಾವಾಣಿ ವಾರ್ತೆ
Published 27 ಮೇ 2020, 8:46 IST
Last Updated 27 ಮೇ 2020, 8:46 IST
ವಿಧಾನಸೌಧ
ವಿಧಾನಸೌಧ   

ಬೆಂಗಳೂರು: ಪಕ್ಷಾಂತರ ನಿಷೇಧ ಕಾಯ್ದೆಗೆ ಸಂಬಂಧಿಸಿದಂತೆ ಭಾರತ ಸಂವಿಧಾನದ ಹತ್ತನೇ ಅನುಸೂಚಿಯಲ್ಲಿ ಪೀಠಾಸೀನ ಅಧಿಕಾರಿಗಳಿಗೆ ಲಭ್ಯವಿರುವ ಅಧಿಕಾರಗಳು ಹಾಗೂ ಅದರ ಅಡಿಯಲ್ಲಿ ರಚಿಸಲಾದ ನಿಯಮಗಳ ಮರು ಪರಿಶೀಲನೆ ಕುರಿತಂತೆ ಅಭಿಪ್ರಾಯ ಪಡೆಯಲು ಮೇ 28ರಂದು ಬೆಳಿಗ್ಗೆ 10-30 ಗಂಟೆಗೆ ವಿಧಾನ ಸೌಧದ ಮೊದಲನೆಯ ಮಹಡಿಯಲ್ಲಿರುವ ಸಮಿತಿ ಕೊಠಡಿಯಲ್ಲಿ ಸಂಸದೀಯ ಪ್ರಮುಖ ನಾಯಕರ ಸಭೆ ನಡೆಯಲಿದೆ.

ರಾಜ್ಯ ವಿಧಾನ ಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ವಿಧಾನ ಸಭೆಯ ಉಪ ಸಭಾಧ್ಯಕ್ಷ ಆನಂದ ಚಂದ್ರಶೇಖರ ಮಾಮನಿ, ಸರ್ಕಾರದ ಮುಖ್ಯ ಸಚೇತಕ ವಿ.ಸುನೀಲ್ ಕುಮಾರ್, ಉಪ ಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ. ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ, ಜೆಡಿಎಸ್‌ನ ಎಚ್‌.ಡಿ.ಕುಮಾರಸ್ವಾಮಿ ಮತ್ತಿತ್ತರು ಭಾಗವಹಿಸುವರು.‌

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT