ADVERTISEMENT

VIDEO: ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ ವೇ: ಒಂದೂವರೆ ತಾಸಿನ ಪ್ರಯಾಣ!

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2022, 3:03 IST
Last Updated 17 ಸೆಪ್ಟೆಂಬರ್ 2022, 3:03 IST

ಬಹುನಿರೀಕ್ಷಿತ ಬೆಂಗಳೂರು–ಮೈಸೂರು ಹೆದ್ದಾರಿ ಹತ್ತು ಪಥ ಕಾಮಗಾರಿಯು ಅಂತಿಮ ಘಟ್ಟ ತಲುಪಿದ್ದು, ಈ ಬಾರಿಯ ದಸರಾದಲ್ಲಿ ಪ್ರಯಾಣಿಕರು ಹೆಚ್ಚಿನ ಟ್ರಾಫಿಕ್‌ ಕಿರಿಕಿರಿ ಇಲ್ಲದೇ ಮೈಸೂರು ತಲುಪಬಹುದಾಗಿದೆ. 

ಹತ್ತು ಪಥದಲ್ಲಿ ಆರು ಪಥಗಳು ‘ಎಕ್ಸ್‌ಪ್ರೆಸ್‌ ವೇ’ಗೆ ಮೀಸಲು. ಇದರಲ್ಲಿ ಬೆಂಗಳೂರು–ಮೈಸೂರು ಕಡೆಗೆ ತಲಾ ಮೂರು ಪಥಗಳು ಮೀಸಲಿವೆ. ಇದರ ಎಡಬಲದಲ್ಲಿ ತಲಾ ಎರಡು ಪಥಗಳ ಸರ್ವೀಸ್ ರಸ್ತೆ ಸಹ ನಿರ್ಮಾಣ ಆಗುತ್ತಿದೆ.

ಹಳೇ ಹೆದ್ದಾರಿಯಲ್ಲಿ ಬೆಂಗಳೂರಿನಿಂದ ಮೈಸೂರಿಗೆ ತೆರಳಬೇಕಾದರೆ ಕನಿಷ್ಠ 3–4 ಗಂಟೆ ಬೇಕಿತ್ತು. ಹೊಸ ಹೆದ್ದಾರಿಯಿಂದ ಟ್ರಾಫಿಕ್‌ ಕಿರಿಕಿರಿ ತಪ್ಪಲಿದ್ದು, ಬೈಪಾಸ್‌ಗಳಿಂದಾಗಿ ಸದ್ಯ ಈ ನಗರಗಳ ನಡುವಿನ ಪ್ರಯಾಣದ ಅವಧಿ ಈಗಾಗಲೇ ಸಾಕಷ್ಟು ಕಡಿಮೆ ಆಗಿದೆ. ಅಂತಿಮವಾಗಿ ಪ್ರಯಾಣದ ಒಟ್ಟು ಅವಧಿ ಸರಾಸರಿ 90 ನಿಮಿಷಕ್ಕೆ ಇಳಿಕೆ ಆಗುವ ನಿರೀಕ್ಷೆ ಇದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT