ADVERTISEMENT

ನ್ಯಾಯಮೂರ್ತಿಗಳ ವಿರುದ್ಧ ಆರೋಪ ಅರ್ಜಿದಾರನಿಗೆ ₹1 ಲಕ್ಷ ದಂಡ

ಮಕ್ಕಳಿಗೆ ನೆರವಿಗೆ ದಂಡದ ಮೊತ್ತದ ಬಳಕೆ

​ಪ್ರಜಾವಾಣಿ ವಾರ್ತೆ
Published 12 ಜನವರಿ 2021, 16:25 IST
Last Updated 12 ಜನವರಿ 2021, 16:25 IST
ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಆಫ್‌ಲೈನ್‌ ಪರೀಕ್ಷೆ ಬೇಡ, ಆನ್‌ಲೈನ್‌ ಪರೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ನಾಗರಾಜ್ ಅವರು ಮೈಸೂರಿನ ಜಯಚಾಮರಾಜ ಒಡೆಯರ್ (ಹಾರ್ಡಿಂಜ್ ವೃತ್ತ) ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು
ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಆಫ್‌ಲೈನ್‌ ಪರೀಕ್ಷೆ ಬೇಡ, ಆನ್‌ಲೈನ್‌ ಪರೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ನಾಗರಾಜ್ ಅವರು ಮೈಸೂರಿನ ಜಯಚಾಮರಾಜ ಒಡೆಯರ್ (ಹಾರ್ಡಿಂಜ್ ವೃತ್ತ) ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು   

ಬೆಂಗಳೂರು: ಮೈಸೂರಿನ ಸೋಸಲೆ ಮಠದ ವಿವಾದಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಹೈಕೋರ್ಟ್‌ ನ್ಯಾಯಮೂರ್ತಿಗಳ ವಿರುದ್ಧವೇ ಆರೋಪಗಳನ್ನು ಮಾಡಿದ್ದ ಅರ್ಜಿದಾರ ವಿ. ಗುರುರಾಜ್‌ ಎಂಬುವವರಿಗೆ ಮುಖ್ಯ ನ್ಯಾಯಮೂರ್ತಿ ಅಭಯ್‌ ಶ್ರೀನಿವಾಸ್‌ ಓಕಾ ನೇತೃತ್ವದ ವಿಭಾಗೀಯ ಪೀಠ ₹ 1 ಲಕ್ಷ ದಂಡ ವಿಧಿಸಿದೆ.

ಮಠದ ವಿವಾದಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಗುರುರಾಜ್‌ ಕೂಡ ಒಬ್ಬ ಅರ್ಜಿದಾರ. ತಮ್ಮ ಅರ್ಜಿಯನ್ನು ಕರ್ನಾಟಕದ ಹೊರಗೆ ವಕೀಲಿ ವೃತ್ತಿ ನಡೆಸಿರುವ ನ್ಯಾಯಮೂರ್ತಿಗಳೇ ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದ್ದರು. ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿಯೂ ಆಗಿದ್ದ ಸುಪ್ರೀಂಕೋರ್ಟ್‌‌ನ ಒಬ್ಬ ನಿವೃತ್ತ ನ್ಯಾಯಮೂರ್ತಿ ಕರ್ನಾಟಕ ಮೂಲದ ನ್ಯಾಯಮೂರ್ತಿಗಳ ಮೇಲೆ ಪ್ರಭಾವ ಬೀರುತ್ತಾರೆ ಎಂಬ ಆರೋಪವನ್ನೂ ಮಾಡಿದ್ದರು.

ನ್ಯಾಯಮೂರ್ತಿಗಳ ವಿರುದ್ಧ ಆರೋಪ ಮಾಡಿದ್ದ ಅರ್ಜಿಯನ್ನು ಹಿಂಪಡೆಯಲು ಅರ್ಜಿದಾರರ ಪರ ವಕೀಲರಿಗೆ ಮಂಗಳವಾರ ಅನುಮತಿ ನೀಡಿದ ವಿಭಾಗೀಯ ಪೀಠ, ₹ 1 ಲಕ್ಷ ದಂಡ ವಿಧಿಸಿತು. ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ದಂಡ ಪಾವತಿಸುವಂತೆ ಸೂಚಿಸಿತು. ನಗರದ ಬೀದಿಗಳಲ್ಲಿ ಆಟಿಕೆ ಮತ್ತಿತರ ವಸ್ತುಗಳನ್ನು ಮಾರುತ್ತಿರುವ ಮಕ್ಕಳಿಗೆ ನೆರವು ನೀಡುವುದಕ್ಕೆ ಈ ಮೊತ್ತವನ್ನು ಬಳಸುವಂತೆಯೂ ನಿರ್ದೇಶನ ನೀಡಿತು.

ADVERTISEMENT

’ಇದು ನ್ಯಾಯಾಲಯವನ್ನೂ ಆರೋಪದ ಸುಳಿಗೆ ಸಿಲುಕಿಸುವ ಪ್ರಯತ್ನ. ಅರ್ಜಿದಾರರ ವಿರುದ್ಧ ಸ್ವಯಂಪ್ರೇರಿತವಾಗಿ ಕ್ರಿಮಿನಲ್‌ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಲು ಅವಕಾಶವಿದೆ’ ಎಂದು ನ್ಯಾಯಪೀಠ ಎಚ್ಚರಿಕೆ ನೀಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.