ADVERTISEMENT

ಚುನಾವಣಾ ಅಕ್ರಮ ಆರೋಪ: ಕುಣಿಗಲ್ ಶಾಸಕ ರಂಗನಾಥ್‌ಗೆ ಸುಪ್ರೀಂಕೋರ್ಟ್ ನೋಟಿಸ್‌

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2024, 20:15 IST
Last Updated 2 ಸೆಪ್ಟೆಂಬರ್ 2024, 20:15 IST
<div class="paragraphs"><p>ತತು</p></div>

ತತು

   

ನವದೆಹಲಿ: ಚುನಾವಣಾ ಅಕ್ರಮದ ಆರೋಪದ ಹಿನ್ನೆಲೆಯಲ್ಲಿ ಕುಣಿಗಲ್ ಶಾಸಕ ಎಚ್‌.ಡಿ. ರಂಗನಾಥ್ ಅವರಿಗೆ ಸುಪ್ರೀಂ ಕೋರ್ಟ್‌ ಸೋಮವಾರ ನೋಟಿಸ್‌ ನೀಡಿದೆ.

ಚುನಾವಣಾ ಅಕ್ರಮ ಎಸಗಿ ಆಯ್ಕೆಯಾದ ರಂಗನಾಥ್‌ ಅವರ ಶಾಸಕ ಸ್ಥಾನವನ್ನು ರದ್ದುಗೊಳಿಸುವಂತೆ ಕೋರಿ ಪರಾಜಿತ ಅಭ್ಯರ್ಥಿ ಡಿ.ಕೃಷ್ಣಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ಜೂನ್‌ನಲ್ಲಿ ವಜಾಗೊಳಿಸಿತ್ತು. ಅರ್ಜಿಯಲ್ಲಿರುವ ಆರೋಪಗಳು ಊಹೆ ಹಾಗೂ ಕಲ್ಪನೆಯ ಆಧಾರದಲ್ಲಿವೆ ಎಂದು ಪೀಠ ಅಭಿಪ್ರಾಯಪಟ್ಟಿತ್ತು. 

ADVERTISEMENT

ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಕೃಷ್ಣಕುಮಾರ್ ಅವರು ಸುಪ್ರೀಂ ಕೋರ್ಟ್‌ಗೆ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಪೀಠ, ಎರಡು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ರಂಗನಾಥ್ ಅವರಿಗೆ ಸೂಚಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.