ADVERTISEMENT

ರಾಮನಗರ, ಜಮಖಂಡಿ ಕ್ಷೇತ್ರ: ಉಪ ಚುನಾವಣೆಗಳಲ್ಲೂ ‘ದೋಸ್ತಿ’ ಮುಂದುವರಿಕೆ ?

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2018, 17:25 IST
Last Updated 2 ಅಕ್ಟೋಬರ್ 2018, 17:25 IST
ಅನಿತಾ
ಅನಿತಾ   

ಬೆಂಗಳೂರು: ರಾಮನಗರ ಮತ್ತು ಜಮಖಂಡಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮುಂದುವರೆಸಲು ನಿರ್ಧರಿಸಿವೆ.

ಈ ಎರಡೂ ಕ್ಷೇತ್ರಗಳ ಉಪ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಶೀಘ್ರದಲ್ಲೇ ದಿನಾಂಕ ಘೋಷಿಸುವ ಸಾಧ್ಯತೆ ಇದೆ. ರಾಮನಗರ ಕ್ಷೇತ್ರವನ್ನು ಜೆಡಿಎಸ್‍ಗೂ, ಜಮಖಂಡಿ ಕ್ಷೇತ್ರವನ್ನು ಕಾಂಗ್ರೆಸ್‍ಗೆ ಬಿಟ್ಟು ಕೊಟ್ಟು, ‘ಮೈತ್ರಿ’ಯಿಂದ ಸ್ಪರ್ಧಿಸಿದರೆ, ಬಿಜೆಪಿಯನ್ನು ಸುಲಭವಾಗಿ ಮಣಿಸಬಹುದೆಂಬ ಲೆಕ್ಕಾಚಾರ ಎರಡೂ ಪಕ್ಷಗಳ ನಾಯಕರದ್ದು.

ರಾಮನಗರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ಅನಿತಾ ಕುಮಾರಸ್ವಾಮಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಜಮಖಂಡಿ ಕ್ಷೇತ್ರದಲ್ಲಿ ಸಿದ್ದು ನ್ಯಾಮಗೌಡ ಅವರ ಪುತ್ರ ಆನಂದ ನ್ಯಾಮಗೌಡ ಅವರಿಗೆ ಕಾಂಗ್ರೆಸ್‌ ಟಿಕೆಟ್ ನೀಡುವ ಸಾಧ್ಯತೆ ಇದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.