ADVERTISEMENT

ಅಂಜನಾದ್ರಿ ದರ್ಶನಕ್ಕೆ ಅವಕಾಶ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2020, 7:18 IST
Last Updated 12 ಡಿಸೆಂಬರ್ 2020, 7:18 IST

ಗಂಗಾವತಿ (ಕೊಪ್ಪಳ ಜಿಲ್ಲೆ): ತಾಲ್ಲೂಕಿನ ಆನೆಗೊಂದಿ ಸಮೀಪದ ಅಂಜನಾದ್ರಿ ಬೆಟ್ಟದ ಆಂಜನೇಯ ದೇಗುಲ ದರ್ಶನಕ್ಕೆ ಜಿಲ್ಲಾಡಳಿತವು ಭಕ್ತರಿಗೆ ಅವಕಾಶ ಕಲ್ಪಿಸಿದ್ದು, ದರ್ಶನಕ್ಕೆ ಬೆಳಿಗ್ಗೆ 8 ರಿಂದ ಮಧ್ಯಾಹ್ನ 3ರವರೆಗೆ ಸಮಯ ನಿಗದಿಪಡಿಸಿದೆ.

ಮಧ್ಯಾಹ್ನ 3 ರಿಂದ ಮರುದಿನ ಬೆಳಿಗ್ಗೆ 8ರವರೆಗೆ ದೇವಸ್ಥಾನ ಸುತ್ತಮುತ್ತಲಿನ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿ ಇರುತ್ತದೆ. ದರ್ಶನಕ್ಕೆ ಅವಕಾಶ ಇರುವುದಿಲ್ಲ ಎಂದು ಉಪವಿಭಾಗಾಧಿಕಾರಿ ನಾರಾಯಣರೆಡ್ಡಿ ಕನಕರೆಡ್ಡಿ ತಿಳಿಸಿದ್ದಾರೆ.

ಚಿರತೆ ಮತ್ತು ಕರಡಿ ಹಾವಳಿ ಹೆಚ್ಚಿದ್ದ ಕಾರಣ ಭಕ್ತರಿಗೆಒಂದು ತಿಂಗಳಿನಿಂದ ದರ್ಶನ ನಿರ್ಬಂಧಿಸಲಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.