ADVERTISEMENT

ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರಕ್ಕೆ ಅನುವು: ಖಂಡ್ರೆ ಬಗ್ಗೆ ಬಿಜೆಪಿ ಟೀಕೆ

ಬಂಡೀಪುರ ಅರಣ್ಯದಲ್ಲಿ ನಿರ್ಧಿಷ್ಠ ವಾಹನಗಳಿಗೆ ರಾತ್ರಿ ಸಂಚಾರಕ್ಕೆ ಅನುವು ಮಾಡಿ ಕೊಟ್ಟಿರುವುದಕ್ಕೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರನ್ನು ಬಿಜೆಪಿ ತೀವ್ರ ತರಾಟೆಗೆ ತೆಗೆದುಕೊಂಡಿದೆ.

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 9 ಜನವರಿ 2025, 5:15 IST
Last Updated 9 ಜನವರಿ 2025, 5:15 IST
<div class="paragraphs"><p>ಈಶ್ವರ ಖಂಡ್ರೆ</p></div>

ಈಶ್ವರ ಖಂಡ್ರೆ

   

– ‍ಪ್ರಜಾವಾಣಿ ಚಿತ್ರ

ಬೆಂಗಳೂರು: ಬಂಡೀಪುರ ಅರಣ್ಯದಲ್ಲಿ ನಿರ್ಧಿಷ್ಠ ವಾಹನಗಳಿಗೆ ರಾತ್ರಿ ಸಂಚಾರಕ್ಕೆ ಅನುವು ಮಾಡಿ ಕೊಟ್ಟಿರುವುದಕ್ಕೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರನ್ನು ಬಿಜೆಪಿ ತೀವ್ರ ತರಾಟೆಗೆ ತೆಗೆದುಕೊಂಡಿದೆ.

ADVERTISEMENT

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಈಶ್ವರ ಖಂಡ್ರೆ ಅವರೇ, ನೀವು ಕರ್ನಾಟಕದ ಅರಣ್ಯ ಸಚಿವರೋ? ಕೇರಳದ ಅರಣ್ಯ ಸಚಿವರೋ? ಎಂದು ಪ್ರಶ್ನಿಸಿದೆ.

ಬಂಡೀಪುರದಲ್ಲಿ ವನ್ಯಜೀವಿಗಳ ಸಂರಕ್ಷಣೆ ಮಾಡಬೇಕಾಗಿದ್ದು ಅರಣ್ಯ ಸಚಿವರ ಕೆಲಸ. ಅದನ್ನು ಬಿಟ್ಟು ಕೇರಳದ ಲಾಭಿಗೆ ಮಣಿದು ಕಾಂಗ್ರೆಸ್ ನಾಯಕರಿಗೆ ರಾತ್ರಿ ವೇಳೆ ಅರಣ್ಯ ಪ್ರದೇಶದಲ್ಲಿ ಸುತ್ತಿ ಮೋಜು ಮಸ್ತಿ ಮಾಡಲು ಅವಕಾಶ ಮಾಡಿ ಕೊಡುತ್ತಿದ್ದಿರಾ. ಈ ಮೂಲಕ ವನ್ಯಜೀವಿಗಳ ಜೀವಕ್ಕೆ ಕಂಟಕ ತಂದಿದ್ದಿರಿ ಎಂದು ಟೀಕಿಸಿದೆ.

ಈ ಹಿಂದೆ ವಯನಾಡು ಮಾಜಿ ಸಂಸದ ರಾಹುಲ್ ಗಾಂಧಿ ಅವರ ತಾಳಕ್ಕೆ ಕುಣಿದು ಕನ್ನಡಿಗರ ತೆರಿಗೆ ಹಣವನ್ನು ನೀಡಿದ್ದೀರಿ. ಇದೀಗ ರಾಹುಲ್‌ ಗಾಂಧಿಯವರ ಸಹೋದರಿ ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ಅವರನ್ನು ಮೆಚ್ಚಿಸಲು ಬಂಡೀಪುರದಲ್ಲಿ ರಾತ್ರಿ ವೇಳೆ ಸಂಚಾರಕ್ಕೆ ಅವಕಾಶ ಕೊಟ್ಟಿದ್ದೀರಿ. ಕರ್ನಾಟಕದ ಅರಣ್ಯ ರಕ್ಷಣೆಗೆ ನಿಂತಿದ್ದಿರೋ ಅಥವಾ ಬಂಡೀಪುರದಲ್ಲಿ ವನ್ಯಜೀವಿಗಳ ಸರ್ವನಾಶಕ್ಕೆ ನಿಂತಿದ್ದಿರೋ? ಎಂದು ಪ್ರಶ್ನಿಸಿದೆ.

ಬಂಡೀಪುರ ಅರಣ್ಯದಲ್ಲಿ ಕೆಲ ಬಸ್ ಹಾಗೂ ಆಂಬುಲೆನ್ಸ್‌ಗೆ ಮಾತ್ರ ರಾತ್ರಿ ಸಂಚಾರಕ್ಕೆ ಅನುವು ಮಾಡಿ ಕೊಡಲಾಗುವುದು ಎಂದು ಇತ್ತೀಚೆಗೆ ಈಶ್ವರ್ ಖಂಡ್ರೆ ಹೇಳಿದ್ದಾಗಿ ವರದಿಯಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.