ಬೆಂಗಳೂರು: ‘ಕೃಷ್ಣಾ ಮೇಲ್ದಂಡೆ ಯೋಜನೆಗಾಗಿ ಭೂಸ್ವಾಧೀನ ಪಡಿಸಿಕೊಂಡ ಜಮೀನಿಗೆ ರಾಜ್ಯ ಸರ್ಕಾರ ಕೂಡಲೇ ಪರಿಹಾರ ನೀಡಬೇಕು’ ಎಂದು ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ ಆಗ್ರಹಿಸಿದ್ದಾರೆ.
‘2023ರ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ತ್ವರಿತವಾಗಿ ಪೂರ್ಣಗೊಳಿಸುವ ಭರವಸೆ ನೀಡಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರತಿವರ್ಷ ₹40 ಸಾವಿರ ಕೋಟಿಯಂತೆ ಐದು ವರ್ಷಗಳಲ್ಲಿ ₹ 2 ಲಕ್ಷ ಕೋಟಿ ನೀಡುವ ಮೂಲಕ ಯೋಜನೆ ಪೂರ್ಣಗೊಳಿಸುತ್ತೇವೆ ಎಂದಿದ್ದರು. ಆದರೆ, ಇದುವರೆಗೆ ಯಾವುದೇ ಕಾಮಗಾರಿಯನ್ನು ಕೈಗೊಂಡಿಲ್ಲ’ ಎಂದು ಆರೋಪಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.