
ಪ್ರಜಾವಾಣಿ ವಾರ್ತೆ
ಅಶ್ವಿನಿ ವೈಷ್ಣವ್
ನವದೆಹಲಿ: ಆಲಮಟ್ಟಿ-ಕುಷ್ಟಗಿ ನೂತನ ರೈಲು ಮಾರ್ಗಕ್ಕೆ ಐದು ತಿಂಗಳಲ್ಲಿ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧವಾಗಲಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
ಆಲಮಟ್ಟಿ - ಕುಷ್ಟಗಿ ನೂತನ ರೈಲ್ವೆ ಮಾರ್ಗದ ಸರ್ವೇ ಕಾರ್ಯ ಆಗಲೇ ಮುಗಿದಿದ್ದು, 2026ರ ಮೇ ಅಂತ್ಯದೊಳಗೆ ಡಿಪಿಆರ್ ತಯಾರಾಗಲಿದೆ ಎಂದು ತಿಳಿಸಿದ್ದಾರೆ.
ಈ ನೂತನ ರೈಲು ಮಾರ್ಗದ ಕುರಿತು ವಿಜಯಪುರ ಸಂಸದ ರಮೇಶ್ ಜಿಗಜಿಣಗಿ ಮತ್ತು ಬಾಗಲಕೋಟೆ ಸಂಸದ ಪಿ.ಸಿ ಗದ್ದಿಗೌಡರ್ ಅವರು ಸಚಿವ ಪ್ರಲ್ಹಾದ ಜೋಶಿ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದರು. ಈ ಬಗ್ಗೆ ಜೋಶಿ ಅವರು ಅಶ್ವಿನಿ ವೈಷ್ಣವ್ ಅವರನ್ನು ಸಂಸತ್ ಭವನದಲ್ಲಿ ಬುಧವರ ಭೇಟಿ ಮಾಡಿ ಚರ್ಚಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.