ADVERTISEMENT

ಸಿಎಟಿ ಮೆಟ್ಟಿಲೇರಿದ ಅಲೋಕ್‌ ಕುಮಾರ್

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2019, 9:44 IST
Last Updated 6 ಆಗಸ್ಟ್ 2019, 9:44 IST
   

ಬೆಂಗಳೂರು: ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ನೇಮಕಾತಿ ಆದೇಶಕ್ಕೆ ತಡೆ ನೀಡಲು ಸಿಎಟಿ (ಕೇಂದ್ರೀಯ ಆಡಳಿತ ನ್ಯಾಯಮಂಡಳಿ) ನಿರಾಕರಿಸಿದೆ.

ಈ ಕುರಿತಂತೆ ನಿಕಟಪೂರ್ವ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಸಿಎಟಿ ನ್ಯಾಯಾಂಗ ಸದಸ್ಯ ಕೆ.ಬಿ.ಸುರೇಶ್‌ ಹಾಗೂ ಆಡಳಿತ ಸದಸ್ಯ ಸಿ.ವಿ.ಶಂಕರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ಅರ್ಜಿದಾರ ಅಲೋಕ್‌ ಕುಮಾರ್ ಪರ ವಾದ ಮಂಡಿಸಿದ ಹಿರಿಯ ವಕೀಲ ಪಿ.ಎಸ್‌.ರಾಜಗೋಪಾಲ್‌, ಅರ್ಜಿದಾರರು ಆಯುಕ್ತ ಹುದ್ದೆಯಲ್ಲಿ ಒಂದು ವರ್ಷ ಪೂರೈಸುವ ಮೊದಲೇ ವರ್ಗಾವಣೆ ಮಾಡಲಾಗಿದೆ. ಇದು ಪೊಲೀಸ್‌ ಕಾಯ್ದೆ–1963ರ ಕಲಂ 20 ಎಫ್‌ ಅನುಸಾರ ಕಾನೂನು ಬಾಹಿರ. ಆದ್ದರಿಂದ ರಾಜ್ಯ ಸರ್ಕಾರ ಇದೇ 2ರಂದು ಮಾಡಿರುವ ವರ್ಗಾವಣೆ ಆದೇಶಕ್ಕೆ ತಡೆ ನೀಡಬೇಕು’ ಎಂದು ಕೋರಿದರು.

ADVERTISEMENT

ರಾಜ್ಯ, ಕೇಂದ್ರ ಸರ್ಕಾರ ಮತ್ತು ಭಾಸ್ಕರ್ ರಾವ್ ಅವರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ ಪ್ರತಿವಾದಿಗಳು ಆಕ್ಷೇಪಣೆ ಸಲ್ಲಿಸಲು ಸೂಚಿಸಿದೆ. ಇದೇ 14ಕ್ಕೆ ವಿಚಾರಣೆ ಮುಂದೂಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.