ADVERTISEMENT

ಹಳೆ ವಿದ್ಯಾರ್ಥಿಗಳು ಮಾರ್ಗದರ್ಶಕರು– ರಾಜೀವ್‌ ಗೌಡ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2024, 20:26 IST
Last Updated 24 ಫೆಬ್ರುವರಿ 2024, 20:26 IST
ನಗರದ ಕುವೆಂಪು ಕಲಾಕ್ಷೇತ್ರದಲ್ಲಿ ಬೆಂಗಳೂರು ತಾಂತ್ರಿಕ ಮಹಾವಿದ್ಯಾಲಯ ಆಯೋಜಿಸಿದ್ದ ಕೈಗಾರಿಕಾ ಅಕಾಡೆಮಿ ಮತ್ತು ಹಳೆ ವಿದ್ಯಾರ್ಥಿಗಳ ಶೃಂಗಸಭೆಯನ್ನು ರಾಜ್ಯ ಪರಿವರ್ತನಾ ಸಂಸ್ಥೆಯ ಅಧ್ಯಕ್ಷ ಎಂ.ವಿ. ರಾಜೀವ್‌ ಗೌಡ ಉದ್ಘಾಟಿಸಿದರು. ಉದ್ಯಮಿ ಮದನ್‌ ಪದಕಿ, ರಾಜ್ಯ ಒಕ್ಕಲಿಗರ ಸಂಘದ ಗೌರವಾಧ್ಯಕ್ಷ ಬಿ. ಕೆಂಚಪ್ಪಗೌಡ ಇದ್ದರು 
ನಗರದ ಕುವೆಂಪು ಕಲಾಕ್ಷೇತ್ರದಲ್ಲಿ ಬೆಂಗಳೂರು ತಾಂತ್ರಿಕ ಮಹಾವಿದ್ಯಾಲಯ ಆಯೋಜಿಸಿದ್ದ ಕೈಗಾರಿಕಾ ಅಕಾಡೆಮಿ ಮತ್ತು ಹಳೆ ವಿದ್ಯಾರ್ಥಿಗಳ ಶೃಂಗಸಭೆಯನ್ನು ರಾಜ್ಯ ಪರಿವರ್ತನಾ ಸಂಸ್ಥೆಯ ಅಧ್ಯಕ್ಷ ಎಂ.ವಿ. ರಾಜೀವ್‌ ಗೌಡ ಉದ್ಘಾಟಿಸಿದರು. ಉದ್ಯಮಿ ಮದನ್‌ ಪದಕಿ, ರಾಜ್ಯ ಒಕ್ಕಲಿಗರ ಸಂಘದ ಗೌರವಾಧ್ಯಕ್ಷ ಬಿ. ಕೆಂಚಪ್ಪಗೌಡ ಇದ್ದರು    

ಬೆಂಗಳೂರು: ‘ಹಳೆಯ ವಿದ್ಯಾರ್ಥಿಗಳು ವಿಸ್ತೃತ ಕುಟುಂಬವಾಗಿದ್ದು, ಮಾರ್ಗದರ್ಶಕರ ಪಾತ್ರ ನಿರ್ವಹಿಸುತ್ತಾರೆ’ ಎಂದು ರಾಜ್ಯ ಪರಿವರ್ತನಾ ಸಂಸ್ಥೆಯ ಅಧ್ಯಕ್ಷ ಎಂ.ವಿ. ರಾಜೀವ್‌ ಗೌಡ ಹೇಳಿದರು.

ರಾಜ್ಯ ಒಕ್ಕಲಿಗ ಸಂಘದ ಶಿಕ್ಷಣ ಸಂಸ್ಥೆಯಾದ ಬೆಂಗಳೂರು ತಾಂತ್ರಿಕ ಮಹಾವಿದ್ಯಾಲಯ (ಬಿಐಟಿ) ನಗರದ ಕುವೆಂಪು ಕಲಾಕ್ಷೇತ್ರದಲ್ಲಿ ಆಯೋಜಿಸಿದ ಎರಡು ದಿನಗಳ ಕೈಗಾರಿಕಾ ಅಕಾಡೆಮಿ ಮತ್ತು ಹಳೆ ವಿದ್ಯಾರ್ಥಿಗಳ ಶೃಂಗಸಭೆಯಲ್ಲಿ ಅವರು ಮಾತನಾಡಿದರು.

ಹಳೆಯ ವಿದ್ಯಾರ್ಥಿಗಳ ಸಂಘದ ಅಗತ್ಯವನ್ನು ವಿವರಿಸಿದ ಅವರು, ‘ಬೆಂಗಳೂರಿಗೆ ಬಂದು ಅಧ್ಯಯನ ಮಾಡಲು ಸಿಗುವ ಅವಕಾಶವನ್ನು ವಿದ್ಯಾರ್ಥಿಗಳು ಬಳಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ADVERTISEMENT

ಉದ್ಯಮಿ ಮದನ್‌ ಪದಕಿ ಮಾತನಾಡಿ, ‘ವ್ಯಕ್ತಿಯ ಆಂತರಿಕ ಮತ್ತು ಬಾಹ್ಯ ಗುಣಲಕ್ಷಣಗಳ ಅಭಿವೃದ್ಧಿಗೆ ವಿಶ್ವಾಸ, ಸಂವಹನ, ಸಹಾನುಭೂತಿ, ಸಾಂವಿಧಾನಿಕ ಮೌಲ್ಯಗಳು, ಸೃಷ್ಟಿಕರ್ತ, ಹವಾಮಾನ, ಚಾಟ್‌ ಜಿಪಿಟಿ ಅರಿವು ಮತ್ತು ಸಮುದಾಯ ನಿರ್ಮಾಣದಂತಹ ಗುಣಗಳನ್ನು ಅಳವಡಿಸಿಕೊಳ್ಳಬೇಕು’ ಎಂದರು.

‌ಶೃಂಗ ಸಭೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನಗಳ, ಉತ್ಪನ್ನಗಳ ಪ್ರದರ್ಶನದ 100ಕ್ಕೂ ಹೆಚ್ಚು ಮಳಿಗೆಗಳು ಇದ್ದವು. ವಿದ್ಯಾರ್ಥಿಗಳು, ಪೋಷಕರು ಮತ್ತು ವಾಣಿಜ್ಯೋದ್ಯಮಿಗಳು ಸೇರಿದಂತೆ ಐದು ಸಾವಿರಕ್ಕೂ ಹೆಚ್ಚು ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. 

ಬಿಐಟಿ ಆಡಳಿತ ಮಂಡಳಿ ಅಧ್ಯಕ್ಷ ಎಸ್‌.ಕೆ. ಧರ್ಮೇಶ್‌, ರಾಜ್ಯ ಒಕ್ಕಲಿಗರ ಸಂಘದ ಗೌರವಾಧ್ಯಕ್ಷ ಬಿ. ಕೆಂಚಪ್ಪಗೌಡ‌, ಒಕ್ಕಲಿಗರ ಸಂಘದ ಉಪಾಧ್ಯಕ್ಷ ಎಲ್‌. ಶ್ರೀನಿವಾಸ್‌,  ಹಾಪ್‌ಕಾಮ್ಸ್‌ ಅಧ್ಯಕ್ಷ ಸಿ. ದೇವರಾಜು ಮತ್ತಿತರರು ಇದ್ದರು.  

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.