ADVERTISEMENT

ಶ್ರೀ ಕಂಠೀರವ ಸ್ಟುಡಿಯೋ ಆವರಣದಲ್ಲಿ ಡಾ. ಅಂಬರೀಷ್ ಸ್ಮಾರಕ ನಿರ್ಮಾಣ

​ಪ್ರಜಾವಾಣಿ ವಾರ್ತೆ
Published 29 ಜೂನ್ 2020, 8:18 IST
Last Updated 29 ಜೂನ್ 2020, 8:18 IST
   

ಬೆಂಗಳೂರು:ಖ್ಯಾತ ನಟ ಡಾ. ಅಂಬರೀಷ್ ಅವರ ಸ್ಮಾರಕವನ್ನು ನಿರ್ಮಿಸಲು ಶ್ರೀ ಕಂಠೀರವ ಸ್ಟುಡಿಯೋಸ್ ಆವರಣದಲ್ಲಿ 1 ಎಕರೆ 34 ಗುಂಟೆ ಜಾಗ ಗುರುತಿಸಲಾಗಿದ್ದು, ಶೀಘ್ರವೇ ಸ್ಮಾರಕ ನಿರ್ಮಾಣಕ್ಕೆ ಅಗತ್ಯ ಯೋಜನೆ ರೂಪಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೂಚಿಸಿದರು.

ಅವರು ಸೋಮವಾರ ಡಾ. ಅಂಬರೀಷ್ ಸ್ಮಾರಕ ಪ್ರತಿಷ್ಠಾನದ ಉನ್ನತ ಮಟ್ಟದ ಸಮಿತಿಯ ಪ್ರಥಮ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಸ್ಮಾರಕ ನಿರ್ಮಾಣಕ್ಕಾಗಿ ರಾಜ್ಯ ಸರ್ಕಾರವು ₹5 ಕೋಟಿ ಒದಗಿಸಲಿದೆ. ಸ್ಮಾರಕ ನಿರ್ಮಾಣಕ್ಕೆ ಶೀಘ್ರವೇ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸೂಚಿಸಿದರು.

ಅಲ್ಲದೆ, ಸ್ಮಾರಕ ನಿರ್ಮಾಣ ತ್ವರಿತಗತಿಯಲ್ಲಿ ನಡೆಯಲು ಅನುಕೂಲವಾಗುವಂತೆ ಇಲಾಖೆಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಉಪ ಸಮಿತಿ ರಚಿಸುವಂತೆ ಸೂಚಿಸಿದರು.

ADVERTISEMENT

ಸಭೆಯಲ್ಲಿ ಸಂಸದೆ ಸುಮಲತಾ ಅಂಬರೀಷ್, ನಟ ಅಭಿಷೇಕ್ ಅಂಬರೀಷ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಹಿರಿಯ ನಟ ದೊಡ್ಡಣ್ಣ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿ ಎಂ. ಮಹೇಶ್ವರರಾವ್, ಆಯುಕ್ತ ಡಾ. ಪಿ.ಎಸ್. ಹರ್ಷ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.